ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಾನು ಸುಮ್ಮನಿರುವುದು ದೌರ್ಬಲ್ಯವಲ್ಲ: ಸಿಎಂ ಎಚ್ಚರಿಕೆ (BJP | Yeddyurappa | Deve gowda | Kumaraswamy | JDS)
Bookmark and Share Feedback Print
 
ನಾನು ಸುಮ್ಮನಿದ್ದೇನೆ ಎಂದರೆ ಅದರ ಅರ್ಥ ದುರ್ಬಲ ಎಂದಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಪಕ್ಷಗಳ ಮುಖಂಡರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳು ರಾಜಕೀಯದ ಸ್ವಾರ್ಥಕ್ಕಾಗಿ ಬಿಜೆಪಿ ಸರ್ಕಾರದ ಅಭಿವೃದ್ಧಿಯನ್ನು ಸಹಿಸದೆ ತಮ್ಮ ಶಕ್ತಿ ಪ್ರದರ್ಶನ ಮಾಡುತ್ತಿರಬಹುದು. ಆದರೆ ನಾನು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ತಕ್ಕ ಪ್ರತ್ಯುತ್ತರ ನೀಡುವುದಾಗಿ ತಿರುಗೇಟು ನೀಡಿದರು.

ಕೆಐಎಡಿಬಿ ಮೂಲಕ ವಶಪಡಿಸಿಕೊಂಡ ಜಮೀನನ್ನು ಡಿನೋಟಿಫೈ ಮಾಡಲಾಗುತ್ತಿದೆ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಹಿಂದಿನ ನಾಲ್ಕೈದು ವರ್ಷಗಳಲ್ಲಿ ಎಷ್ಟೆಷ್ಟು ಜಮೀನನ್ನು ಡಿನೋಟಿಫೈ ಮಾಡಲಾಗಿದೆ ಎಂಬ ವಿವರವನ್ನೇ ಪತ್ರಿಕೆಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸೋಣ. ಜನರಿಗೆ ಸತ್ಯಾಸತ್ಯತೆ ತಿಳಿಯಲಿ ಎಂದು ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಇವರೆಲ್ಲಾ ಆಡಳಿತಾರೂಢ ಬಿಜೆಪಿ ವಿರುದ್ಧ ಅನಾವಶ್ಯಕವಾಗಿ ಆರೋಪ ಹೊರಿಸುತ್ತಿದ್ದಾರೆ ಎಂದು ಈ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ