ರೈತರ ಭೂಮಿ ವಶಪಡಿಸಿಕೊಳ್ಳುವುದು ಸೇರಿದಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳವ ಮುನ್ನ ತುಸು ವಿವೇಚನೆಯಿಂದ ಪರಾಮರ್ಶಿಸಿ ಎಂದು ಮುಖ್ಯಮಂತ್ರಿಗಳಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಲಹೆ ನೀಡಿದ್ದಾರೆ.
ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಉದ್ದೇಶ ನಮಗಿಲ್ಲ. ಆದರೆ, ರೈತರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ. ನೂರಾರು ಎಕರೆ ಭೂಸ್ವಾಧೀನ ಮಾಡಿಕೊಳ್ಳುವಾಗ ರೈತರೊಂದಿಗೆ ಮಾತುಕತೆ ನಡೆಸಬೇಕು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನ್ಯಾಯ ಒದಗಿಸಬೇಕು ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಯಾವುದೇ ಸರಕಾರಕ್ಕೆ ಶೋಭೆ ತರುವುದಿಲ್ಲ. ಇದನ್ನು ಯಡಿಯೂರಪ್ಪ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.