ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರೈತಾಪಿವರ್ಗಕ್ಕೆ ಹೆಚ್ಚಿನ ಅನುಕೂಲಗಳನ್ನು ಕಲ್ಪಿಸಿಕೊಡಲಾಗುವುದು, ಅಲ್ಲದೇ ಯಾವುದೇ ಕಾರಣಕ್ಕೂ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ಒಣ ಹಾಗೂ ಫಲವತ್ತಲ್ಲದ ಭೂಮಿಯನ್ನು ಬಳಸಿಕೊಳ್ಳುವುದು ಅನಿವಾರ್ಯ ಎಂದರು. ಕೆಲವರು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಯಾರ ಆಡಳಿತದಲ್ಲಿ ಏನು ಆಗಿದೆ. ಫಲವತ್ತಾದ ಭೂಮಿಯನ್ನು ಯಾರು ವಶಪಡಿಸಿಕೊಂಡಿದ್ದರು ಎಂಬುದನ್ನು ಸದನದಲ್ಲಿ ಬಹಿರಂಗಪಡಿಸುತ್ತೇನೆ. ನಾನು ಮುಖ್ಯಮಂತ್ರಿಯಾಗಿ ಇರುವವರೆಗೂ ರೈತ ಸಮುದಾಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದರು.
ಸಾವಯವ ಕೃಷಿಗೆ 100ಕೋಟಿ ರೂ. ನೀಡಲಾಗುವುದು. ಗ್ರಾಮೀಣ ಭಾಗಗಳಿಗೆ ಹೆಚ್ಚು ಮೂಲಸೌಕರ್ಯ ಒದಗಿಸಲಾಗುವುದು ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಹೇಳಿದರು.