ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಕೊರತೆಗೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಆರಂಭಗೊಂಡ ಪ್ಲಾಸ್ಟಿಕ್ ತ್ಯಾಜ್ಯ ಮರುಬಳಕೆ ತಂತ್ರಜ್ಞಾನ ಮಹಾಮೇಳ 2010ನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿನ ವಿದ್ಯುತ್ ಸಮಸ್ಯೆ ನಿವಾರಿಸಲು ರಾಜ್ಯ ಸರ್ಕಾರ ಯಾವುದೇ ಪ್ರಯತ್ನ ನಡೆಸುತ್ತಿಲ್ಲ ಎಂದು ಆಪಾದಿಸಿದರು.
ಕರ್ನಾಟಕಕ್ಕೆ ರಾಜ್ಯಪಾಲರಾಗಿ ಬಂದು ಆರು ತಿಂಗಳಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಪ್ರತಿಯೊಂದು ಬೆಳವಣಿಗೆಯನ್ನು ನಾನು ಗಮನಿಸುತ್ತಿದ್ದೇನೆ. ವಿದ್ಯುತ್ ಅಭಾವ ದಿನೇ ದಿನೇ ಹೆಚ್ಚಾಗುತ್ತಿದ್ದು ಇದನ್ನು ನಿವಾರಿಸಲು ರಾಜ್ಯ ಸರ್ಕಾರ ಯಾವುದೇ ಪ್ರಯತ್ನ ನಡೆಸಿಲ್ಲ ಎಂದರು.
ನೆನೆಗುದಿಗೆ ಬಿದ್ದಿರುವ ವಿದ್ಯುತ್ ಯೋಜನೆಗಳನ್ನು ಆದಷ್ಟು ಬೇಗ ಕಾರ್ಯಗತಗೊಳಿಸಿದ್ದರೆ ಇಷ್ಟೊಂದು ಪ್ರಮಾಣದ ವಿದ್ಯುತ್ ಅಭಾವ ಉಂಟಾಗುತ್ತಿರಲಿಲ್ಲ ಎಂದು ಹೇಳಿದರು.