ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಡಿಎ ಭೂ ಅಕ್ರಮದಲ್ಲಿ ಸಿಎಂ ಕುಟುಂಬ: ಉಗ್ರಪ್ಪ ಆರೋಪ (BJP | BDA | Yeddyurappa | Ugrappa | Congress)
Bookmark and Share Feedback Print
 
ಬಿಡಿಎ ಹೊಸದಾಗಿ ನಿರ್ಮಿಸುತ್ತಿರುವ ಬಡಾವಣೆಗಳ ಜಮೀನು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ನೂರಾರು ಕೋಟಿಗಳ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಾಂಗ್ರೆಸ್‌ನ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಒತ್ತಾಯಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಡಾವಣೆ ನಿರ್ಮಾಣಕ್ಕೆ ಜಮೀನುಗಳನ್ನು ವಶಪಡಿಸಿಕೊಂಡು, ನಂತರ ನೂರಾರು ಕೋಟಿ ರೂಪಾಯಿಗಳನ್ನು ಲಂಚವಾಗಿ ಪಡೆದು ಕೆಲ ಜಮೀನುಗಳನ್ನು ಡಿ ನೋಟಿಫೈ ಮಾಡಲಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳ ಸಂಬಂಧಿಗಳು, ಅವರ ಸುತ್ತಲಿನ ಅಧಿಕಾರಿಗಳು ಭಾಗಿಯಾಗಿದ್ದಾರೆಂದು ಆರೋಪಿಸಿದರು.

ಸರ್ಕಾರ ಡಿ ನೋಟಿಫೈ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ಆಗಿಲ್ಲ ಎನ್ನುವುದಾದರೇ ಈ ಬಗ್ಗೆ ಸಿಬಿಐ ತನಿಖೆ ನಡೆಸಲಿ, ಆಗ ಸತ್ಯಾಂಶ ಹೊರಬರುತ್ತೆ ಎಂದರು.

ಯಲಹಂಕ ಸಮೀಪ ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದ ಸುಮಾರು 56ಎಕರೆ ಜಮೀನನ್ನು ಡಿನೋಟಿಫೈ ಮಾಡಲಾಗಿದೆ. ಈ ಜಮೀನು ಉದ್ಯಮಿ ಮಾರ್ತಾಂಡ ಸಿಂಗ್ ಮಹೇಂದ್ರ ಎನ್ನುವರಿಗೆ ಸೇರಿದ್ದು, ಈ ವ್ಯವಹಾರವೊಂದರಲ್ಲೇ ನೂರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ದೂರಿದರು.

ಬಿಜೆಪಿ ಪಕ್ಷದ ಶಾಸಕರು, ಸಂಸದರಿಗೆ ಸೇರಿದ ಜಮೀನುಗಳನ್ನು ಡಿ ನೋಟಿಫೈ ಮಾಡಲಾಗಿದೆ. ಸಿಬಿಐ ತನಿಖೆ ನಡೆಸಿದರೆ ಎಲ್ಲಾ ದಾಖಲೆಗಳನ್ನು ನೀಡುವುದಾಗಿ ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ