ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಕ್ಸಲ್ ದಮನಕ್ಕೆ ರಾಜ್ಯ ಸರ್ಕಾರ ವಿಫಲ: ಡಿವಿ ವಾಗ್ದಾಳಿ (Sadananda gowda | Yeddyurappa | BJP | Naxal | UPA)
Bookmark and Share Feedback Print
 
ನಕ್ಸಲೀಯರನ್ನು ಮಟ್ಟಹಾಕಲು ಮತ್ತು ನಕ್ಸಲ್‌ಗೆ ಸಂಬಂಧಿಸಿದ ವರದಿಯನ್ನು ಕೇಂದ್ರಕ್ಕೆ ಒಪ್ಪಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಇತ್ತೀಚೆಗಷ್ಟೇ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ಸಂಸದ ಸದಾನಂದ ಗೌಡ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನಕ್ಸಲ್ ಪೀಡಿತ ಪ್ರದೇಶಗಳಿಗೆ ಹಾಗೂ ಅವರ ಸಮಸ್ಯೆಗಳಿಗೆ ಸಮರ್ಪಕವಾಗಿ ಕಾರ್ಯಕ್ರಮ ರೂಪಿಸಬೇಕಾಗಿತ್ತು. ಆದರೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದರು.

ರಾಜ್ಯ ಸರ್ಕಾರ ನಕ್ಸಲ್ ಸಮಸ್ಯೆ ಬಗ್ಗೆ ಹಾಗೂ ಯೋಜನೆಗಳ ಕುರಿತು ವಿವರವಾದ ದಾಖಲೆಗಳನ್ನು ಕೇಂದ್ರ ಸರ್ಕಾರಕ್ಕೆ ನೀಡಿ ಗಮನ ಸೆಳೆಯಬೇಕಾಗಿತ್ತು. ರಾಜ್ಯ ಸರ್ಕಾರ ನಕ್ಸಲ್ ಸಮಸ್ಯೆ ಇಲ್ಲ ಎಂದು ಹೇಳಿರುವುದು ಸರಿಯಲ್ಲ ಎಂದು ಆರೋಪಿಸಿದರು.

ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿ ಮತ್ತು ವಿವಿಧ ಯೋಜನೆಗಳ ಬಗ್ಗೆ ಕೆಲಸ ಕೈಗೊಳ್ಳಲು ಕೇಂದ್ರ ಸರ್ಕಾರ ಹೆಚ್ಚು ಹಣ ಬಿಡುಗಡೆ ಮಾಡುತ್ತಿದೆ. ರಾಜ್ಯ ಸರ್ಕಾರ ಸಮಗ್ರ ಮಾಹಿತಿ ನೀಡಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಬರುವ ಆರ್ಥಿಕ ನೆರವಿಗೆ ತಡೆಯಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ