ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಆದಿಚುಂಚನಗಿರಿ ಜಾತ್ರೆಯಲ್ಲಿ ನೂಕುನುಗ್ಗಲು: ಕಾಲ್ತುಳಿತಕ್ಕೆ ಮಹಿಳೆ ಬಲಿ (Adichunchangiri | Mandya)
Bookmark and Share Feedback Print
 
ಮಂಡ್ಯ ಜಿಲ್ಲೆಯ ಆದಿಚುಂಚನ ಗಿರಿಯಲ್ಲಿ ನಡೆಯುತ್ತಿರುವ ಜಾತ್ರೋತ್ಸವದಲ್ಲಿ ಕಾಲ್ತುಳಿತಕ್ಕೆ ಓರ್ವ ಮಹಿಳೆ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಮಳವಳ್ಳಿ ನಿವಾಸಿ ನಾಗಮ್ಮ (65) ಎಂದು ಗುರುತಿಸಲಾಗಿದೆ.

ಆದಿಚುಂಚನಗಿರಿ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಿಂದ ಕಾಲಭೈರವೇಶ್ವರನ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಭಾನುವಾರ ಬೆಳಗ್ಗಿನ ಜಾವ ಐದು ಗಂಟೆಯ ಸುಮಾರಿಗೆ ನಡೆದ ರಥೋತ್ಸವಕ್ಕೆ ನಿರೀಕ್ಷೆಗೂ ಮೀರಿ ಜನಸ್ತೋಮ ಹರಿದು ಬಂದಿತ್ತು. ಹೀಗಾಗಿ ರಥೋತ್ಸವ ಆರಂಭವಾಗುವ ಮೊದಲೇ ಭಾರೀ ನೂಕುನುಗ್ಗಲು ಆರಂಭವಾಯ್ತು. ಹೀಗಾಗಿ ಹಲವರು ಕಾಲ್ತುಳಿತಕ್ಕೆ ಒಳಗಾಗಬೇಕಾಯಿತು.

ಗಾಯಾಳುಗಳನ್ನು ಈಗಾಗಲೇ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈಗ 23 ಮಂದಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸುಧಾರಿಸಿವೆ. ಉಳಿದವರು ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಒಂದೆರಡು ದಿನಗಳೊಳಗೆ ಒಳರೋಗಿಗಳನ್ನೂ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ