ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿಯೇ ಸಿದ್ಧ: ಸಿಎಂ (Yeddyurappa | Renukacharya | BJP | Congress)
Bookmark and Share Feedback Print
 
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸದಂತೆ ದಲಿತ ಸಂಘಟನೆ, ಪ್ರಗತಿಪರ ಹಾಗೂ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿಯೇ ಸಿದ್ಧ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬಾಳೆಹೊನ್ನೂರಿನ ಶ್ರೀರಂಭಾಪುರಿ ಪೀಠದಲ್ಲಿ ನಡೆದ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಗೋ ಹತ್ಯೆ ನೇಷದ ಮಸೂದೆ ಸಿದ್ದಪಡಿಸಲಾಗಿದ್ದು, ಅದನ್ನು ಜಾರಿಗೊಳಿಸುವುದು ನಿಶ್ಚಿತ ಎಂದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಈ ವಿಚಾರದಲ್ಲಿಯೂ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿರುವುದಾಗಿ ಆರೋಪಿಸಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ಸಂಬಂಧಿಸಿದ್ದಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ನಿಯಂತ್ರಣದಲ್ಲಿರುವುದಾಗಿ ತಿಳಿಸಿದರು. ನಕ್ಸಲ್ ವಿಚಾರ ಕುರಿತಂತೆ ಸಂಸದರಾದ ಡಿ.ವಿ.ಸದಾನಂದ ಗೌಡ, ಅನಂತ್ ಕುಮಾರ್ ಹೆಗಡೆ ಅವರೊಂದಿಗೆ ಚರ್ಚಿಸುವುದಾಗಿ ನುಡಿದರು.
ಸಂಬಂಧಿತ ಮಾಹಿತಿ ಹುಡುಕಿ