ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಕ್ರಮ ಕಟ್ಟಡ ನೆಲಸಮಕ್ಕೆ ನೋಟಿಸ್ ಅನಗತ್ಯ: ಹೈಕೋರ್ಟ್ (High court | BBMP | BDA | Police | Bangalore)
Bookmark and Share Feedback Print
 
ಸಾರ್ವಜನಿಕ ಪ್ರದೇಶದಲ್ಲಿ ತಲೆ ಎತ್ತಿರುವ ಅಕ್ರಮ ಕಟ್ಟಡಗಳನ್ನು ನೋಟಿಸ್ ನೀಡದೆ ನೆಲಸಮಗೊಳಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಸಾರ್ವಜನಿಕರ ಉಪಯೋಗಕ್ಕಾಗಿ ಬಳಸುವ ಜಾಗದಲ್ಲಿ ತಲೆ ಎತ್ತಿರುವ ಅಕ್ರಮ ಕಟ್ಟಡಗಳನ್ನು ಯಾವುದೇ ಮುನ್ಸೂಚನೆ ನೀಡದೆ ನೆಲಸಮಗೊಳಿಸಲು ಕರ್ನಾಟಕ ಮುನ್ಸಿಪಲ್ ಕೌನ್ಸಿಲ್ ಕಾಯ್ದೆ ಅಡಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೀಡಿದ ಅಧಿಕಾರವನ್ನು ಎತ್ತಿ ಹಿಡಿದಿದೆ.

ಈ ಕುರಿತು ಆಕ್ಷೇಪಗಳು ಏನಾದರೂ ಇದ್ದರೆ ಅಂತಹ ವ್ಯಕ್ತಿಗಳು ಖಾಸಗಿ ದಾವೆಯನ್ನು ಹೂಡಲಿ, ಅದನ್ನು ಬಿಟ್ಟು ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಅವಕಾಶವಿಲ್ಲ ಎಂದು ನ್ಯಾಯಮೂರ್ತಿ ವಿ.ಗೋಪಾಲಗೌಡರ ನೇತೃತ್ವದ ಪೀಠ ತೀರ್ಪು ನೀಡಿದೆ.

ಈ ಹಿಂದೆ ನೋಟಿಸ್ ನೀಡದೆ ಕೆಲ ಅಕ್ರಮ ಕಟ್ಟಡಗಳ ನೆಲಸಮಕ್ಕೆ ಪಾಲಿಕೆ ಮುಂದಾಗಿದ್ದಾಗ ಅನೇಕ ಪ್ರತಿಭಟನೆ, ಧರಣಿ ನಡೆಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಸಂಬಂಧಿತ ಮಾಹಿತಿ ಹುಡುಕಿ