ತಮಿಳುನಾಡು ವಿಧಾನಸಭೆಯ ಸಚಿವಾಲಯದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಮಿಳುನಾಡು ಮುಕ್ತ ಆಹ್ವಾನ ನೀಡಿದೆ.
ಮಾ.13ರಂದು ಚೆನ್ನೈನಲ್ಲಿ ನಡೆಯಲಿರುವ ತಮಿಳುನಾಡು ಸಚಿವಾಲಯದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಪರವಾಗಿ ವಾರ್ತಾಸಚಿವ ಪರುಧಿ ಇಳಂವಳಧಿ ಅವರು ಸೋಮವಾರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳ ನಡುವೆ ಇರುವ ಸಹೋದರ ಬಾಂಧವ್ಯ ಇಂತಹ ಕಾರ್ಯಕ್ರಮಗಳಲ್ಲಿ ತಾವು ಪಾಲ್ಗೊಳ್ಳುವುದರಿಂದ ಮತ್ತಷ್ಟು ವೃದ್ಧಿಯಾಗುತ್ತದೆ ಎಂದರು.
ಈ ಸಮಾರಂಭದಲ್ಲಿ ಸೋನಿಯಾಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಅವರು ಸಹ ಭಾಗವಹಿಸುತ್ತಿದ್ದು, ತಾವು ಸಹ ನೆರೆ ರಾಜ್ಯದ ಇಂತಹ ಮಹತ್ತರ ಸಮಾರಂಭದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದೇನೆ. ಈ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರಿಗೆ ಪತ್ರ ಬರೆಯುವುದಾಗಿ ಹೇಳಿದರು.