ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿ: ಗೌಡ (Deve gowda | JDS | BJP | Congress | Bharadwaj | Karnataka)
Bookmark and Share Feedback Print
 
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರವನ್ನು ಕೂಡಲೇ ವಜಾ ಮಾಡಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಒತ್ತಾಯಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬಿಜೆಪಿ ಸರ್ಕಾರ ಮೇಲಿಂದ ಮೇಲೆ ಎಡವುತ್ತಲೇ ಬಂದಿದೆ. ಇದನ್ನು ರಾಜ್ಯಪಾಲರು ನೋಡಿಕೊಂಡು ಕಣ್ಣು ಮುಚ್ಚಿ ಕುಳಿತುಕೊಳ್ಳಬಾರದು. ಅವರು ಸಂವಿಧಾನ ಬದ್ಧವಾಗಿರುವ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಕೋಮುವಾದಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ರಾಜ್ಯದಲ್ಲಿ ನಿರಂತರವಾಗಿ ಅಶಾಂತಿ ನಿರ್ಮಾಣವಾಗಿದೆ. ಚರ್ಚ್‌ಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದೆ ಎಂದು ಆರೋಪಿಸಿದರು. ತಾವು ಪ್ರತಿಭಟನೆಗೆ ಇಳಿದ ಕಾರಣಕ್ಕಾಗಿಯೇ ನಗರದಲ್ಲಿ ನಿಷೇಧಾಜ್ಞೆ ಜಾರಿಮಾಡಿದ್ದಾರೆ ಎಂದು ಗೌಡರು ಅಸಮಾಧಾನ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ