ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯಪಾಲರು ಸರ್ಕಾರಕ್ಕೆ ಬೆದರಿಕೆ ಹಾಕಬಾರ್ದು: ನಾಯ್ಡು (Venkaiah naidu | BJP | Congress | siddaramaiah)
Bookmark and Share Feedback Print
 
ರಾಜ್ಯಪಾಲರು ನಿಷ್ಪಕ್ಷಪಾತವಾಗಿ ವರ್ತಿಸುವ ಮೂಲಕ ಸಂವಿಧಾನದ ಷೋಷಕರಾಗಿರಬೇಕೆ ಹೊರತು, ಸರ್ಕಾರವನ್ನು ಯಾವಾಗಲೂ ಬೆದರಿಸುತ್ತಿರಬಾರದು ಎಂದು ರಾಜ್ಯಸಭಾ ಸದಸ್ಯ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸರ್ಕಾರಕ್ಕೆ ಮಾರ್ಗದರ್ಶನ ನೀಡುತ್ತಿರಬೇಕು. ಆದರೆ ಕರ್ನಾಟಕದಲ್ಲಿ ಯಾವಾಗಲೂ ಸರ್ಕಾರವನ್ನು ಬೆದರಿಸುತ್ತಿರುತ್ತಾರೆ. ಇದು ಕಾಂಗ್ರೆಸ್‌ನಿಂದ ಬಂದ ದುರಭ್ಯಾಸ ಎಂದು ಟೀಕಿಸಿದರು.

ರಾಜ್ಯದಲ್ಲಿನ ವಿದ್ಯುತ್ ಸಮಸ್ಯೆಗೆ ಕೇಂದ್ರವನ್ನು 40ವರ್ಷಗಳ ಕಾಲ ಆಳಿದ ಕಾಂಗ್ರೆಸ್ ಪಕ್ಷವೇ ಕಾರಣ. ಯಾವ ಸರ್ಕಾರಗಳೂ ಒಂದೇ ರಾತ್ರಿಯಲ್ಲಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲ. ಇದು ಸಿದ್ದರಾಮಯ್ಯ, ದೇಶಪಾಂಡೆ, ಡಿಕೆಶಿ ಅವರಿಗೂ ತಿಳಿದಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಸಂಚು ನಡೆಸುವ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಉರುಳಿಸಿ ಅಧಿಕಾರದ ಗದ್ದುಗೆ ಏರುವ ಪ್ರಯತ್ನ ನಡೆಸುತ್ತಿವೆ ಎಂದು ಆರೋಪಿಸಿದ ಅವರು, ನಿಮ್ಮ ಕೀಳುಮಟ್ಟದ ರಾಜಕೀಯ ನೋಡಿಯೇ ಮತದಾರರು ಚುನಾವಣೆಯಲ್ಲಿ ನಿಮಗೆ ಬುದ್ಧಿ ಕಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ