ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶಿವಮೊಗ್ಗಕ್ಕೆ ತೊಗಾಡಿಯಾ ಬಂದ್ರೆ ಗಲಾಟೆಯಾಗಲ್ಲ: ಆಚಾರ್ಯ (Praveen Togadia | Vishva Hindu Parishad | Acharya | Yeddyurappa | BJP)
ಹಿಂಸಾಚಾರದಿಂದ ತತ್ತರಿಸಿರುವ ಶಿವಮೊಗ್ಗಕ್ಕೆ ವಿಶ್ವಹಿಂದೂ ಪರಿಷತ್ ಮುಖಂಡ ಪ್ರವೀಣ್ ತೊಗಾಡಿಯಾ ಭೇಟಿ ನೀಡಿದರೆ ಮತ್ತೆ ಘರ್ಷಣೆ ನಡೆಯುವ ಸಾಧ್ಯತೆ ಇದೆ ಎಂಬ ಪ್ರತಿಪಕ್ಷಗಳ ಹೇಳಿಕೆ ಮಂಗಳವಾರ ಮೇಲ್ಮನೆಯಲ್ಲಿ ವಾಕ್ಸಮರಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ಸಭಾತ್ಯಾಗ ಮಾಡಿದ ಘಟನೆ ನಡೆಯಿತು.
ರಾಜ್ಯಮಟ್ಟದ ಪತ್ರಿಕೆಯೊಂದರಲ್ಲಿ ಬಂದಿರುವ ಲೇಖನದ ವಿರುದ್ಧ ಶಿವಮೊಗ್ಗ, ಹಾಸನ, ದಾವಣಗೆರೆಯಲ್ಲಿ ಸಾಕಷ್ಟು ಹಿಂಸಾಚಾರ ಸಂಭವಿಸಿತ್ತು. ಆ ನಿಟ್ಟಿನಲ್ಲಿ ಶಿವಮೊಗ್ಗ, ಹಾಸನಗಳಲ್ಲಿ ನಿಷೇಧಾಜ್ಞೆ ಮುಂದುವರಿದಿದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಸಂಘಪರಿವಾರದ ತೊಗಾಡಿಯಾ ಆಗಮಿಸುವುದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ಪರಿಷತ್‌ನ ವಿಪಕ್ಷ ನಾಯಕಿ ಮೋಟಮ್ಮ ಅವರು ಆತಂಕ ವ್ಯಕ್ತಪಡಿಸಿದರು.
ಇದರಿಂದ ಕಲಾಪದಲ್ಲಿ ಸಾಕಷ್ಟು ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ವಿ.ಎಸ್.ಆಚಾರ್ಯ, ಮಾ.7ರಂದು ಶಿವಮೊಗ್ಗದಲ್ಲಿ ಹಿಂದೂ ಸಮಾವೇಶ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ತೊಗಾಡಿಯಾ ಪಾಲ್ಗೊಳ್ಳುವುದು ಮೊದಲೇ ನಿರ್ಧಾರವಾಗಿದೆ. ಅಲ್ಲದೇ ತೊಗಾಡಿಯಾ ಬಂದರೆ ಗಲಾಟೆಯಾಗಲ್ಲ ಎಂದು ಸಮಜಾಯಿಷಿ ನೀಡಿದರು.
ಗೃಹ ಸಚಿವರ ಹೇಳಿಕೆಯಿಂದ ಆಕ್ರೋಶಗೊಂಡ ಜೆಡಿಎಸ್ ಮುಖಂಡ ಎಂ.ಸಿ.ನಾಣಯ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಸಭಾತ್ಯಾಗ ಮಾಡಿದರು.