ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಬೆಂಗಳೂರು ಮಹಾನಗರ ಪಾಲಿಕೆಯ ಬಸ್ ಪ್ರಯಾಣ ದರವನ್ನು ಬುಧವಾರದಿಂದಲೇ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.
ಬಸ್ ಪ್ರಯಾಣ ದರ ಹೆಚ್ಚಳ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಬಸ್ ಪ್ರಯಾಣ ದರವನ್ನು ಶೇ.8ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ.
ಶೇ.6ರಿದ 8ರಷ್ಟು ದರ ಏರಿಕೆ ಅನಿವಾರ್ಯವಾಗಿದೆ. ಪರಿಸ್ಥಿತಿ ಗಮನಿಸಿ ನಂತರ ಯಾವ ಪ್ರಮಾಣದಲ್ಲಿ ದರ ಹೆಚ್ಚಿಸಬೇಕೆಂಬುದನ್ನು ಸಂಜೆ ವೇಳೆಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದಾಗಿ ಮೂಲಗಳು ತಿಳಿಸಿವೆ.
ಕೇಂದ್ರದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ತೈಲ ಬೆಲೆ ಹೆಚ್ಚಿಸಿರುವುದರಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಗೆ ಪ್ರತಿದಿನ ಸುಮಾರು 50ಲಕ್ಷ ರೂಪಾಯಿ ನಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯ ಎಂದು ಮೂಲಗಳು ಹೇಳಿವೆ.