ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಎಷ್ಟೇ ಹಣ ಖರ್ಚಾಗಲಿ ಸಮರ್ಪಕ ವಿದ್ಯುತ್ ಕೊಡ್ತೇವೆ: ಸಿಎಂ (BJP | Yeddyurappa | Congress | JDS | Karnataka)
Bookmark and Share Feedback Print
 
ರಾಜ್ಯದಲ್ಲಿ ಬೇಸಿಗೆ ಅವಧಿಯ ತಿಂಗಳಲ್ಲಿ ವಿದ್ಯುತ್ ಪೂರೈಕೆಗೆ ತೊಂದರೆಯಾಗದಂತೆ ಅಗತ್ಯಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ಸಮರ್ಪಕ ವಿದ್ಯುತ್ ಪೂರೈಕೆಗೆ ಎಷ್ಟೇ ಹಣ ಖರ್ಚಾದರು ಹಿಂದೆ ಮುಂದೆ ನೋಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಪರಿಷತ್‌ನಲ್ಲಿ ಮಾತನಾಡುತ್ತ ತಿಳಿಸಿದರು.

ವಿಶೇಷವಾಗಿ ಏಪ್ರಿಲ್ ಮತ್ತು ಮೇ ತಿಂಗಳವರೆಗೆ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನಿರಂತರವಾಗಿ ವಿದ್ಯುತ್ ಪೂರೈಸುವುದಾಗಿ ಘೋಷಿಸಿದರು. ರಾಜ್ಯದಲ್ಲಿ ವಿದ್ಯುತ್ ಅಭಾವ ಕುರಿತಂತೆ ಪ್ರತಿಪಕ್ಷಗಳ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಯವರು, ಹಿಂದಿನ ಯಾವುದೇ ಸರ್ಕಾರಗಳು ವಿದ್ಯುತ್ ಅಭಾವ ನೀಗಿಸಲು ಸೂಕ್ತ ಕೈಗೊಂಡಿಲ್ಲ. ಆದರೆ ಬಿಜೆಪಿ ಸರ್ಕಾರ ವಿದ್ಯುತ್ ಕೊರತೆ ಇಲ್ಲದಂತೆ ಮಾಡಲು ಅಗತ್ಯ ಕ್ರಮ ಕೈಗೊಂಡಿದೆ ಎಂದರು.

ಏಪ್ರಿಲ್ ತಿಂಗಳಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗಾಗಿ 750ಮೆಗಾ ವ್ಯಾಟ್ ಖರೀದಿಗೆ ನಾಳೆಯೇ ಅಲ್ಪ ಕಾಲದ ಟೆಂಡರನ್ನು ಕರೆಯಲಾಗುವುದು ಎಂದು ಪ್ರಕಟಿಸಿದರು.

ರಾಜ್ಯ ಸರ್ಕಾರ ಕೆಪಿಟಿಸಿಎಲ್‌ಗೆ ಇದೇ ಮೊದಲ ಬಾರಿಗೆ 500ಕೋಟಿ ರೂ.ಗಳ ಷೇರು ಬಂಡವಾಳವನ್ನು ಒದಗಿಸಿದೆ. ಆದರೆ, ಕಳೆದ 15ವರ್ಷಗಳಲ್ಲಿ ಈ ಸಂಸ್ಥೆಗೆ ಯಾವುದೇ ಸರ್ಕಾರದಿಂದ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಣಕಾಸು ನೆರವು ದೊರಕಿರಲಿಲ್ಲ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ