ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ 207 ಕೋಟಿ, ಹಜ್ ಭವನ (State Budget | Karnataka Budget 2010-11 | Yaddyurappa | BJP Government | Minority Development)
ಮುಖ್ಯಮಂತ್ರಿ ಯಡಿಯೂರಪ್ಪ ಅವರು 2010-11ನೇ ಸಾಲಿನ ಕರ್ನಾಟಕದ ಆಯವ್ಯಯ ಪತ್ರವನ್ನು ಶುಕ್ರವಾರ ಮಂಡಿಸಿದ್ದು, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
2010-11 ಅವಧಿಯಲ್ಲಿ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಕೆಲಸ ಕಾರ್ಯಗಳಿಗಾಗಿ 207 ಕೋಟಿ ರೂ. ಮೀಸಲಿರಿಸಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ 5 ಕೋಟಿ ರೂ. ವ್ಯಯಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.
ರಾಜ್ಯದ ವಿವಿಧೆಡೆ ಶಾದಿ ಮಹಲ್ ನಿರ್ಮಾಣಕ್ಕಾಗಿ 10 ಕೋಟಿ ರೂ. ಮೀಸಲಿಡಲಾಗಿದ್ದು, ಅಲ್ಪ ಸಂಖ್ಯಾತರ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಳಿಗಾಗಿ 10 ಕೋಟಿ ನಿಗದಿ ಪಡಿಸಲಾಗಿದೆ. ಅದೇ ರೀತಿ ಬೆಂಗಳೂರಿನ ಮಸ್ತಾನ್ ದರ್ಗಾ ಅಭಿವೃದ್ಧಿಗೆ 50 ಲಕ್ಷ ಮೀಸಲಿಡಲಾಗಿದೆ.