ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಬಿಎಂಪಿ ಚುನಾವಣೆ: ಮಾ.28ಕ್ಕೆ ಮುಹೂರ್ತ ಫಿಕ್ಸ್ (BBMP | BJP | Yeddyurappa | Election | Congress)
Bookmark and Share Feedback Print
 
ಬಿಬಿಎಂಪಿ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಬೆನ್ನಲ್ಲೇ, ಮಾರ್ಚ್ 28ರಂದು ಬಿಬಿಎಂಪಿ ಚುನಾವಣೆ ನಡೆಸುವುದಾಗಿ ರಾಜ್ಯ ಚುನಾವಣಾ ಆಯೋಗ ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದೆ.

ಶನಿವಾರ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಿ.ಆರ್.ಚಿಕ್ಕಮಠ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ವಿವರಣೆ ನೀಡಿದ್ದು, ಬಿಬಿಎಂಪಿ ಚುನಾವಣೆಗೆ ಸಕಲ ಸಿದ್ದತೆ ನಡೆಸಿಕೊಂಡಿದ್ದೇವೆ. ಆ ನಿಟ್ಟಿನಲ್ಲಿ ಮಾ.28ಕ್ಕೆ ಚುನಾವಣೆ ನಡೆಸಲು ದಿನ ನಿಗದಿ ಮಾಡಿರುವುದಾಗಿ ತಿಳಿಸಿದರು.

ಮಾರ್ಚ್ 8ರಂದು ಈ ಬಗ್ಗೆ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದ್ದು, ನಾಳೆಯಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ಬಿಬಿಎಂಪಿಯ 198 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 66, 17, 399ಮತದಾರರಿದ್ದಾರೆ. ಇದರಲ್ಲಿ 31ಲಕ್ಷದ 37ಸಾವಿರ 101ಮಹಿಳಾ ಮತದಾರರು, 34ಲಕ್ಷದ 80ಸಾವಿರದ 258ಪುರುಷ ಮತದಾರರಿದ್ದಾರೆ. ಒಟ್ಟು 6590ಮತಗಟ್ಟೆ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಚುನಾವಣಾ ವಿವರ:

ಮಾರ್ಚ್-15 ನಾಮಪತ್ರ ಸಲ್ಲಿಕೆಗೆ ಕಡೇ ದಿನ

ಮಾರ್ಚ್-17 ನಾಮಪತ್ರ ಪರಿಶೀಲನೆ

ಮಾರ್ಚ್ 19 ನಾಮಪತ್ರ ನಾಪಸ್ಸಿಗೆ ಕಡೇ ದಿನ

ಮಾರ್ಚ್ 28-ಚುನಾವಣೆ

ಏಪ್ರಿಲ್ -04 ಮತ ಎಣಿಕೆ

ಏಪ್ರಿಲ್-05- ಫಲಿತಾಂಶ ಪ್ರಕಟ

ಚುನಾವಣೆ ಮುಂದೂಡಿ- ರಾಜ್ಯ ಸರ್ಕಾರ ಸುಪ್ರೀಂಗೆ ಮೊರೆ: ಒಂದೆಡೆ ರಾಜ್ಯ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣಾ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದರೆ, ಮತ್ತೊಂದೆಡೆ ಬಿಬಿಎಂಪಿ ಚುನಾವಣೆ ಮುಂದೂಡುವಂತೆ ಕೋರಿ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಸೋಮವಾರ ಅರ್ಜಿಯ ವಿಚಾರಣೆ ನಡೆಯಲಿದೆ.

ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇರುವುದರಿಂದ ಮಾರ್ಚ್ ತಿಂಗಳಿನಲ್ಲಿ ಚುನಾವಣೆ ನಡೆಸಲು ಅಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಏಪ್ರಿಲ್ 18ಕ್ಕೆ ಚುನಾವಣೆ ನಡೆಸಲು ಅನುವು ಮಾಡಿಕೊಡಬೇಕೆಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಮಾರ್ಚ್ 28ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಅಂತಿಮ ಆದೇಶ ನೀಡಿದ್ದರು ಕೂಡ, ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ಛೀಮಾರಿ ಹಾಕಿಸಿಕೊಂಡಿತ್ತು. ಆದರೂ ಇದೀಗ ರಾಜ್ಯ ಸರ್ಕಾರ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಸಂಬಂಧಿತ ಮಾಹಿತಿ ಹುಡುಕಿ