ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಬಿಎಂಪಿ ಚುನಾವಣೆಗೆ ಸಿದ್ಧ-ಮೇಲ್ಮನವಿ ವಾಪಸ್: ಸಿಎಂ (BBMP | yeddyurappa | BJP | Supreme court | Election)
Bookmark and Share Feedback Print
 
ಬಿಬಿಎಂಪಿ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿರುವ ಬೆನ್ನಲ್ಲೇ ಚುನಾವಣೆಗೆ ಬಿಜೆಪಿ ಕೂಡ ಸಿದ್ಧವಾಗಿದೆ ಎಂದು ಹೇಳಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಚುನಾವಣೆ ಮುಂದೂಡವಂತೆ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯನ್ನು ಹಿಂದಕ್ಕೆ ಪಡೆಯಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಆ ಪ್ರಕಾರವೇ ಎಲ್ಲವೂ ನಡೆಯಲಿದೆ. ಇದಕ್ಕೆ ನಮ್ಮ ಕಡೆಯಿಂದ ಸಂಪೂರ್ಣ ಸಹಕಾರ ಇರುತ್ತದೆ ಎಂದವರು ಉತ್ತರಿಸಿದ್ದಾರೆ.

ಪರೀಕ್ಷೆಗಳು ಮತ್ತು ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಕಾರಣಕ್ಕೆ ಚುನಾವಣೆ ಮುಂದೂಡುವಂತೆ ಕೋರಲು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ನಡುವೆ ಆಯೋಗ ಕೂಡ ದಿನಾಂಕಗಳನ್ನು ಪ್ರಕಟಿಸಿದೆ. ಹೀಗಾಗಿ ಮತ್ತೆ ಸುಪ್ರೀಂಕೋರ್ಟ್‌ಗೆ ಹೋಗದೆ ಚುನಾವಣೆ ನಡೆಸುವುದು ಸೂಕ್ತ ಎನ್ನುವ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ವಿವರಣೆ ನೀಡಿದ್ದಾರೆ.

ಇದೇ ವೇಳೆ ಚುನಾವಣೆ ಹಿನ್ನೆಲೆಯಲ್ಲಿ ಸದನ ಮುಂದೂಡಲಾಗುವುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಇದು ನನ್ನೊಬ್ಬನ ನಿರ್ಧಾರ ಅಲ್ಲ. ಇದಕ್ಕೆ ಸದನದ ಎಲ್ಲರ ಅಭಿಪ್ರಾಯವೂ ಮುಖ್ಯವಾಗುತ್ತದೆ. ಈ ಬಗ್ಗೆ ಮಾ. 12ರಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸಂಬಂಧಿತ ಮಾಹಿತಿ ಹುಡುಕಿ