ಭೂ ಸ್ವಾಧೀನದ ವಿಚಾರದಲ್ಲಿ ಅಂತಿಮ ಅಧಿಸೂಚನೆಯನ್ನು ಕೈಬಿಡುವ ಮೂಲಕ ಸರ್ಕಾರ ನೂರಾರು ಕೋಟಿ ರೂಪಾಯಿ ಅವ್ಯವಹಾರದಲ್ಲಿ ತೊಡಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ವಿಧಾನಸಭೆಯಲ್ಲಿ ಸೋಮವಾರ ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೂಲಕ ವಿಷಯ ಪ್ರಸ್ತಾಪ ಮಾಡಲು ಪ್ರಯತ್ನ ಮಾಡಿದ ಅವರು, ರೈತರ ಜಮೀನನ್ನು ಬಲವಂತವಾಗಿ ಸ್ವಾಧೀನ ಪಡಿಸಿಕೊಳ್ಳಲು ಹೊರಟಿರುವ ಸರ್ಕಾರ ಅಂತಿಮ ಅಧಿಸೂಚನೆಯಲ್ಲಿ ಕೈಬಿಡುವ ಮೂಲಕ ಭಾರಿ ಅವ್ಯವಹಾರಕ್ಕೆ ಆಸ್ಪದ ಮಾಡಿಕೊಟ್ಟಿದೆ.
ಪಟ್ಟಭದ್ರ ಹಿತಾಸಕ್ತಿ ಅವ್ಯವಹಾರದ ಹಿಂದೆ ಅಡಗಿದೆ. ಸರ್ಕಾರ ಭೂ ಮಾಫಿಯಾ ಮತ್ತು ರಿಯಲ್ ಎಸ್ಟೇಟ್‌ನವರಿಗೆ ಅನುಕೂಲ ಮಾಡಿಕೊಡಬೇಕೆಂಬ ಉದ್ದೇಶದಿಂದ ಅಂತಿಮ ಅಧಿಸೂಚನೆಯನ್ನು ಕೈಬಿಡುತ್ತಿದೆ ಎಂದು ದೂರಿದರು.