ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಬಿಎಂಪಿ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ (BBMP | BJP | Congress | JDS | Election)
Bookmark and Share Feedback Print
 
ಬಿಬಿಎಂಪಿ ಚುನಾವಣೆಯನ್ನು ಮುಂದೂಡುವ ಪ್ರಯತ್ನವನ್ನು ಕೊನೆಗೂ ರಾಜ್ಯ ಸರ್ಕಾರ ಕೈಬಿಟ್ಟಿದೆ. ಏತನ್ಮಧ್ಯೆ ಬಿಬಿಎಂಪಿ ಚುನಾವಣೆಗೆ ಸೋಮವಾರ ಚುನಾವಣಾ ಅಧಿಸೂಚನೆ ಹೊರಬಿದ್ದಿದೆ.

ಆ ನಿಟ್ಟಿನಲ್ಲಿ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದಲೇ ಆರಂಭಗೊಂಡಿದೆ. ಪಾಲಿಕೆ ವ್ಯಾಪ್ತಿಯ 53ವಿಭಾಗ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರಗಳನ್ನು ಬೆಳಿಗ್ಗೆ 11ರಿಂದ ಮಧ್ಯಾಹ್ನ 3ಗಂಟೆಯವರೆಗೆ ಸಲ್ಲಿಸಬಹುದಾಗಿದೆ.

ಮಾರ್ಚ್ 15ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ, 17ರಂದು ನಾಮಪತ್ರಗಳ ಪರಿಶೀಲನೆ, 19ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನ.

ಮಾರ್ಚ್ 28ರಂದು ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 7ರಿಂದ 5ಗಂಟೆಯವರೆಗೆ ಮತದಾನ ನಡೆಯಲಿದೆ. ಏಪ್ರಿಲ್ 4ರಂದು ಮತಗಳ ಎಣಿಕೆ ನಡೆಯಲಿದೆ. ಏಪ್ರಿಲ್5ರಂದು ಫಲಿತಾಂಶ ಘೋಷಣೆ.

ಪಾಲಿಕೆ ಚುನಾವಣೆಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ 6,610ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಪಾಲಿಕೆಯ 198ವಾರ್ಡ್‌ಗಳಲ್ಲಿ ಒಟ್ಟು 66,19,704 ಮತದಾರರಿದ್ದಾರೆ. ಅದರಲ್ಲಿ 34,82,698ಪುರುಷರು ಹಾಗೂ 31,37,006 ಮಹಿಳಾ ಮತದಾರರಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ