ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಮಚಂದ್ರಾಪುರ ಮಠಕ್ಕೆ ಗೋಕರ್ಣ ಯಾಕೆ?: ರೇವಣ್ಣ (Ramachandra pura Mata | Revanna | JDS | BJP)
Bookmark and Share Feedback Print
 
ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಒಪ್ಪಿಸುವ ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ವಿಧಾನಸಭೆಯಲ್ಲಿ ಮಂಗಳವಾರ ತೀವ್ರ ವಿರೋಧ ವ್ಯಕ್ತಪಡಿಸಿದರು.

ನಿಯಮ 69ರ ಅಡಿ ವಿಷಯ ಪ್ರಸ್ತಾಪಿಸಿದ ಅವರು, ಸಾರ್ವಜನಿಕ ಸ್ವತ್ತಾದ ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಒಪ್ಪಿಸುವುದು ಸರಿಯಲ್ಲ. ಕಂದಾಯ ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳು ದೇವಾಲಯದ ಹಸ್ತಾಂತರಕ್ಕೆ ವಿರೋಧ ವ್ಯಕ್ತಪಡಿಸಿದ್ದರೂ ಸರ್ಕಾರ ಏಕಾಏಕಿ ನಿರ್ಧಾರ ಮಾಡಿರುವುದರ ಹಿಂದಿನ ರಹಸ್ಯವಾದರೂ ಏನು ಎಂದು ಪ್ರಶ್ನಿಸಿದರು.

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ 3425ದೇವಾಲಯಗಳ ಪಟ್ಟಿಯಲ್ಲಿ ಗೋಕರ್ಣ ದೇವಾಲಯ 95ನೇ ಸ್ಥಾನದಲ್ಲಿದ್ದು, ಅದನ್ನು ಮಠಕ್ಕೆ ಒಪ್ಪಿಸುವುದು ಎಷ್ಟು ಸಮಂಜಸ ಎಂದರು. ಅಲ್ಲದೇ ರಾಮಚಂದ್ರಾಪುರ ಮಠದಿಂದ ಅರಣ್ಯ ಹಾಗೂ ಸರ್ಕಾರಿ ಜಮೀನು ಒತ್ತುವರಿ ಆಗಿದೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ರೇವಣ್ಣ ಒತ್ತಾಯಿಸಿದರು.
ಸಂಬಂಧಿತ ಮಾಹಿತಿ ಹುಡುಕಿ