ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮೇಲ್ಮನೆ: ಸಾಲಮನ್ನಾ ಚರ್ಚೆ-ಕಾಂಗ್ರೆಸ್ ಸಭಾತ್ಯಾಗ (Congress | JDS | BJP | North karnataka | Bangalore)
Bookmark and Share Feedback Print
 
ಉತ್ತರ ಕರ್ನಾಟಕದ ಪ್ರವಾಹ ಪೀಡಿತ 14ಜಿಲ್ಲೆಗಳಲ್ಲಿನ ರೈತರ ಬೆಳೆಗಳು ನಾಶವಾಗಿದ್ದು, ಸಹಕಾರಿ ಬ್ಯಾಂಕ್‌ಗಳಿಂದ ರೈತರು ಪಡೆದ ಸಾಲವನ್ನು ಮನ್ನಾ ಮಾಡುವ ವಿಷಯದಲ್ಲಿ ಸರ್ಕಾರದ ಉತ್ತರದಿಂದ ಅಸಮಾಧಾನಗೊಂಡ ಕಾಂಗ್ರೆಸ್ ಸದಸ್ಯರು ಮೇಲ್ಮನೆಯಿಂದ ಸಭಾತ್ಯಾಗ ಮಾಡಿದ ಘಟನೆ ಮಂಗಳವಾರ ನಡೆಯಿತು.

ಪ್ರವಾಹದಿಂದಾಗಿ ಲಕ್ಷಾಂತರ ರೂಪಾಯಿ ಬೆಳೆ ನಷ್ಟವಾಗಿದೆ. ರೈತರು ಸಹಕಾರಿ ಬ್ಯಾಂಕ್‌ಗಳಿಂದ ಪಡೆದ ಸಾಲವನ್ನು ಮರುಪಾವತಿ ಮಾಡುವ ಪರಿಸ್ಥಿತಿಯಲ್ಲಿಲ್ಲ, ಹಾಗಾಗಿ ಸರ್ಕಾರ ಕೂಡಲೇ ಅವರ ನೆರವಿಗೆ ಬರಬೇಕೆಂದು ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಎಸ್.ಆರ್.ಪಾಟೀಲ್ ಅವರು, ರೈತರ ಸಾಲ ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಅವರ ನೆರವಿಗೆ ಬಂದ ಜೆಡಿಎಸ್‌ನ ನಾಣಯ್ಯ ಅವರು, 200ಕೋಟಿ ರೂ.ಸಾಲ ಮನ್ನಾ ಮಾಡಲು ನಿಮ್ಮಿಂದ ಆಗುತ್ತಿಲ್ಲವೇ?ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಚಿಂತನೆ ನಡೆಸಿ ಸಮಾಪಾಲು ಆಧಾರದ ಮೇಲೆ ಸಾಲ ಮನ್ನಾ ಮಾಡಿ ಸಲಹೆ ನೀಡಿದರು.

2008ರಲ್ಲಿ 25ಸಾವಿರ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲಾಗಿತ್ತು. ಕೇಂದ್ರ ಸರ್ಕಾರ ಈಗಲೂ 6760ಕೋಟಿ ರೂ. ರಾಜ್ಯಕ್ಕೆ ಮರುಪಾವತಿ ಮಾಡಿದರೆ ರೈತರ ಸಾಲವನ್ನು ಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಉತ್ತರ ನೀಡಿದರು.

ಆದರೆ ಪ್ರವಾಹ ಪೀಡಿತ ರೈತರ ಸಾಲವನ್ನು ಮನ್ನಾ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದ ಕಾಂಗ್ರೆಸ್ ಸದಸ್ಯರು ಸಚಿವರ ಉತ್ತರದಿಂದ ಅಸಮಾಧಾನಗೊಂಡು ಸಭಾತ್ಯಾಗ ಮಾಡಿದರು
ಸಂಬಂಧಿತ ಮಾಹಿತಿ ಹುಡುಕಿ