ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಬಿಎಂಪಿ: ಜೈನ ಸಮಾಜದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ (BBMP | Jaina | High court | Election | BJP)
Bookmark and Share Feedback Print
 
ಬಿಬಿಎಂಪಿ ಚುನಾವಣೆಯ ದಿನಾಂಕ ಈಗಾಗಲೇ ನಿಗದಿಯಾಗಿದೆ. ಹಾಗಾಗಿ ಈ ಪ್ರಕರಣದಲ್ಲಿ ತಾನು ಮಧ್ಯೆ ಪ್ರವೇಶಿಸುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಮಹಾವೀರ ಜಯಂತಿಯಂದು ಚುನಾವಣೆ ನಡೆಸುವ ಕ್ರಮ ಪ್ರಶ್ನಿಸಿ ಅಖಿಲ ಭಾರತ ಶ್ವೇತಾಂಬರ ಜೈನ ಸಮಾಜ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಜಾಗೊಳಿಸಿದೆ.

ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠದ ನ್ಯಾ.ವಿ.ಗೋಪಾಲಗೌಡ ಮತ್ತು ನ್ಯಾ.ಬಿ.ಎಸ್.ಪಾಟೀಲ್ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಈಗಾಗಲೇ ಚುನಾವಣಾ ಅಧಿಸೂಚನೆ ಹೊರಬಿದ್ದಿರುವುದರಿಂದ ಹೈಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ. ಏನೇ ಸಮಸ್ಯೆ ಇದ್ದರೂ ಚುನಾವಣಾ ಆಯೋಗದ ಮುಂದೆ ಹೋಗಿ ಎಂದು ಅರ್ಜಿದಾರರಿಗೆ ಸೂಚನೆ ನೀಡಿದೆ.

ಮಾರ್ಚ್ 28ರಂದು ಮಹಾವೀರ ಜಯಂತಿ ಇದ್ದು, ಇದನ್ನು ರಾಷ್ಟ್ರೀಯ ಹಬ್ಬ ಎಂದು ಪರಿಗಣಿಸಿ ಅಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಆ ಹಿನ್ನೆಲೆಯಲ್ಲಿ ಆ ದಿನದಂದು ಚುನಾವಣೆ ನಡೆಸಬಾರದು ಎಂದು ಜೈನ ಸಮಾಜ ಹೈಕೋರ್ಟ್ ಮೆಟ್ಟಿಲೇರಿತ್ತು.
ಸಂಬಂಧಿತ ಮಾಹಿತಿ ಹುಡುಕಿ