ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶ್ರೀರಾಮುಲು ವಿರುದ್ಧ ಮತ್ತೆ ಆಯೋಗಕ್ಕೆ ದೂರು (Sri Ramumlu | BJP | Divakar babu | Congress | Election commission)
Bookmark and Share Feedback Print
 
ಆರೋಗ್ಯ ಸಚಿವ ಶ್ರೀರಾಮುಲು ಅವರ ವಿರುದ್ಧ ದಾಖಲಾಗಿದ್ದ ಗಂಭೀರ ಸ್ವರೂಪದ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವ ಸರ್ಕಾರದ ಕ್ರಮ ವಿರೋಧಿಸಿ ಮಾಜಿ ಸಚಿವ ದಿವಾಕರ ಬಾಬು ಬುಧವಾರ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಬಳ್ಳಾರಿಯಲ್ಲಿ ಅನಿಲ್ ಲಾಡ್ ಅವರ ಮನೆ ಮುಂದೆ ಗಲಾಟೆ ಮಾಡಿ ಚುನಾವಣೆಗೆ ನಿಲ್ಲಬಾರದು ಎಂದು ಒತ್ತಡ ಹಾಕಿ ಅವರ ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರು ಹಾಗೂ ಇತರೆ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಸಂಬಂಧ ಬಳ್ಳಾರಿ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದು ಗಂಭೀರ ಪ್ರಕರಣ ಆಗಿರುವುದರಿಂದ ಯಾವುದೇ ಕಾರಣಕ್ಕೂ ಇದನ್ನು ಹಿಂದಕ್ಕೆ ಪಡೆಯಬಾರದು ಎಂದು ಡಿಜಿ ಮತ್ತು ಐಜಿಪಿ ಅವರುಗಳು ತಿಳಿಸಿದ್ದರೂ ಸಚಿವ ಸಂಪುಟ ಸಭೆಯಲ್ಲಿ ಶ್ರೀರಾಮುಲು ವಿರುದ್ಧದ ಪ್ರಕರಣವನ್ನು ವಾಪಸ್ ಪಡೆದಿರುವುದು ಸರಿಯಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗ ಕೂಡ ಸಚಿವ ಶ್ರೀರಾಮುಲು ವಿರುದ್ಧದ ಪ್ರಕರಣವನ್ನು ವಾಪಸ್ ಪಡೆದಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು ಎಂಬ ಅಂಶವನ್ನೂ ದಿವಾಕರ ಬಾಬು ದೂರಿನಲ್ಲಿ ನಮೂದಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ