ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶಾಸ್ತ್ರೀಯ ಭಾಷೆ-ಶೀಘ್ರವೇ ಕೇಂದ್ರದಿಂದ ಅಧಿಸೂಚನೆ: ಸಿಎಂ (Yeddyurappa | BJP | Vidhana sowdha | Bharadwaj)
Bookmark and Share Feedback Print
 
ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನದ ಕುರಿತು ಕೇಂದ್ರ ಸರ್ಕಾರದಿಂದ ಒಂದೆರಡು ದಿನಗಳಲ್ಲಿ ಅಧಿಕೃತ ಅಧಿಸೂಚನೆ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸುವ ಚರ್ಚೆ ಸಂದರ್ಭ ಮಾತನಾಡಿದ ಅವರು, ಕನ್ನಡ ಶಾಸ್ತ್ರೀಯ ಭಾಷೆ ಎಂದು ಘೋಷಿಸಿ ಒಂದೂವರೆ ವರ್ಷ ಕಳೆದಿದ್ದರೂ ಶಾಸ್ತ್ರೀಯ ಭಾಷೆಗೆ ಸಿಗುವ ನೆರವು ಮಾತ್ರ ಇನ್ನು ಸಿಕ್ಕಿಲ್ಲ. ಅಲ್ಲದೇ, ಈ ಬಗ್ಗೆ ಇನ್ನು ಅಧಿಸೂಚನೆ ಹೊರಡಿಸದಿರುವುದರ ಬಗ್ಗೆ ಕೇಂದ್ರದ ಗಮನಕ್ಕೆ ತರಲಾಗಿದೆ. ಇದಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರ ಒಂದೆರಡು ದಿನಗಳಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸುವ ಭರವಸೆ ನೀಡಿದೆ ಎಂದರು.

ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ನಾಣ್ನುಡಿಯಂತೆ ರಾಜ್ಯವನ್ನು ಸಮೃದ್ಧಗೊಳಿಸಲು ಪ್ರಯತ್ನಿಸಲಾಗುವುದು ಎಂದ ಅವರು, ಪ್ರಸ್ತುತ ರಾಜ್ಯ ಅಭಿವೃದ್ದಿ ಪಥದತ್ತ ಸಾಗುತ್ತಿದೆ ಎಂದು ಹೇಳಿದರು.

ಅಲ್ಲದೆ, ಕಳೆದ ನಾಲ್ಕೈದು ವರ್ಷಗಳಲ್ಲಿ ಆಡಳಿತ ನಡೆಸಿದ ಸರ್ಕಾರಗಳ ಅವಧಿಯಲ್ಲಿ ರಾಜ್ಯದ ಹಣಕಾಸು ಮತ್ತು ಅಭಿವೃದ್ದಿ ಪರಿಸ್ಥಿತಿ ಹೇಗಿತ್ತು ಎಂಬುದರ ಅಂಕಿ ಅಂಶಗಳನ್ನು ಒಳಗೊಂಡ ಕಿರುಹೊತ್ತಿಗೆಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ