ರಾಜ್ಯ ಸರ್ಕಾರ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರತಿಪಕ್ಷದ ನಾಯಕಿ ಮೋಟಮ್ಮ ಅವರು ಮೇಲ್ಮನೆಯಲ್ಲಿ ಗುರುವಾರ ಆಗ್ರಹಿಸಿದರು.
ಬಜೆಟ್ ಮೇಲಿನ ಸಾಮಾನ್ಯ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದರಿಂದ ಆಹಾರ ಉತ್ಪಾದನೆಯಲ್ಲಿ ಕುಂಠಿತವಾಗಲಿದೆ ಎಂದು ಈ ಸಂದರ್ಭದಲ್ಲಿ ಎಚ್ಚರಿಸಿದರು.
ಪರೋಕ್ಷವಾಗಿ ನೈಸ್ ವಿಷಯ ಪ್ರಸ್ತಾಪಿಸಿದ ಅವರು ಸರ್ಕಾರ ರೈತರ ನೆರವಿಗೆ ಬರಬೇಕು, ಬದಲು ಉದ್ದಿಮೆದಾರರ ಪರವಾಗಿದ್ದುಕೊಂಡು ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಬಾರದು ಎಂದು ಒತ್ತಾಯಿಸಿದರು.
ನೆರೆ ಪೀಡಿತ ಪ್ರದೇಶಗಳಲ್ಲಿ ರೈತರು ಸಾಲದ ಸುಳಿಯಲ್ಲಿದ್ದಾರೆ. ಅವರ ಕೃಷಿ ಭೂಮಿ ಫಲವತ್ತತೆ ಕಳೆದುಕೊಂಡು ಆತಂಕದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ರೈತರ ಬೆಳೆ ಸಾಲವನ್ನು ಮನ್ನಾ ಮಾಡಬೇಕೆಂದು ಕೋರಿದರು.