ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 'ಲೋಕಸಭೆಯಲ್ಲಿ ಅಹಿಂದಾ ವರ್ಗಕ್ಕೆ ಆದ್ಯತೆ ಕೊಡಿ' (JDS | Congress | UPA | BJP | Vidhana sowdha)
Bookmark and Share Feedback Print
 
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಅಲ್ಪಸಂಖ್ಯಾತ, ಹಿಂದುಳಿದ, ದಲಿತ ವರ್ಗಗಳಿಗೆ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸುವಂತೆ ಅಹಿಂದಾ ಮುಖಂಡರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಹಿಂದುಳಿದ, ಅಲ್ಪಸಂಖ್ಯಾತರುಗಳಿಗೆ ಈಗಾಗಲೇ ಅಸ್ತಿತ್ವದಲ್ಲಿರುವ ಹಿಂದುಳಿದ, ಅಲ್ಪಸಂಖ್ಯಾತ ನಾಯಕರ ಪ್ರಭಾವ ಕುಗ್ಗಿಸಿ ಮುಂದುವರಿದ ಜನಾಂಗದ ಮಹಿಳೆಯರಿಗೆ ಅವಕಾಶ ಮಾಡಿಕೊಡಲು ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಲು ಯುಪಿಎ ಮುಂದಾಗಿದೆ ಎಂದು ಅಹಿಂದಾ ಅಧ್ಯಕ್ಷ ಕೆ.ಮುಕುಡಪ್ಪ, ಸಮತಾ ಸೈನಿಕದಳದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಹಿಂದುಳಿದ, ಅಲ್ಪಸಂಖ್ಯಾತರ ನಾಯಕರ ಸ್ಥಾನಗಳನ್ನು ಕಸಿದು ಮಹಿಳೆಯರಿಗೆ ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿರುವ ಈ ಮುಖಂಡರುಗಳು ಅಹಿಂದಾ ವರ್ಗಗಳಿಗೆ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.

ಈಗಾಗಲೇ ಜಿಲ್ಲೆ, ತಾಲೂಕು ಸ್ಥಳೀಯ ಸಂಸ್ಥೆಗಳಲ್ಲಿ ಜಾರಿಯಲ್ಲಿರುವ ಮೀಸಲಾತಿ ಮಾದರಿಯಲ್ಲಿ ವಿಧಾನಸಭೆ, ಲೋಕಸಭೆಯಲ್ಲೂ ಅಹಿಂದಾ ವರ್ಗಕ್ಕೆ ಪ್ರಾತಿನಿಧ್ಯ ದೊರಕಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ