ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಭಿವೃದ್ಧಿಗೆ ಅಡ್ಡಿ; ಕಾಂಗ್ರೆಸ್, ಜೆಡಿಎಸ್ ಮೇಲೆ ಯಡಿಯೂರಪ್ಪ ಕಿಡಿ (Bellary | Karnataka | BS Yediyurappa | BJP govt)
Bookmark and Share Feedback Print
 
ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯದ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿವೆ ಎಂದು ಮತ್ತೆ ಕಿಡಿ ಕಾರಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಂದಿನ ದಿನಗಳಲ್ಲಿ ಈ ಪಕ್ಷಗಳಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ.

ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಪ್ರತಿಪಕ್ಷಗಳಿಗೆ ಸಹಿಸಲಾಗುತ್ತಿಲ್ಲ. ಹಾಗಾಗಿ ಯಾವುದೇ ಕಾರಣವಿಲ್ಲದೆ ರೈತರನ್ನು ವಿರುದ್ಧ ಎತ್ತಿ ಕಟ್ಟುತ್ತಿವೆ. ಆ ಮೂಲಕ ಸರಕಾರಕ್ಕೆ ಕಪ್ಪು ಚುಕ್ಕೆ ತರುವುದು ಅವರ ಉದ್ದೇಶ. ಇವೆರಡೂ ಪಕ್ಷಗಳಿಗೆ ಮುಂದಿನ ದಿನಗಳಲ್ಲಿ ಜನತೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ವಿರೋಧ ಪಕ್ಷಗಳಿಗೆ ಎಚ್ಚರಿಕೆ ನೀಡಿದರು.

ಬೆಂಗಳೂರಿನಿಂದ ಹೆಲಿಕಾಫ್ಟರ್‌ನಲ್ಲಿ ಆಗಮಿಸಿದ ಮುಖ್ಯಮಂತ್ರಿಯವರು ಪತ್ರಕರ್ತರೊಂದಿಗೆ ಮಾತನಾಡುತ್ತಾ, ವಿರೋಧ ಪಕ್ಷಗಳಿಗೆ ಅಭಿವೃದ್ಧಿಗೆ ಅಡ್ಡಗಾಲು ಹಾಕುವುದೇ ಕೆಲಸವಾಗಿದೆ; ವಿಮಾನ ನಿಲ್ದಾಣ, ಹಂಪಿ ಪುನಶ್ಚೇತನ ಸೇರಿದಂತೆ ಸರಕಾರದ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಜಮೀನು ವಶಪಡಿಸಿಕೊಳ್ಳಲು ಹೋದರೆ ರೈತರನ್ನು ಎತ್ತಿಕಟ್ಟಿ ಮಜಾ ತೆಗೆದುಕೊಳ್ಳುತ್ತಿವೆ. ಜಮೀನು ವಶಪಡಿಸಿಕೊಳ್ಳದೆ ಕೈಗಾರಿಕೆಗಳನ್ನು ನಿರ್ಮಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಈ ಯೋಜನೆಯಲ್ಲಿ ಜಮೀನು ಕಳೆದುಕೊಳ್ಳುವ ರೈತರಿಗೆ ಸಾಕಷ್ಟು ಪರಿಹಾರ ನೀಡುವ ಭರವಸೆ ನೀಡಲಾಗಿದೆ. ಅಲ್ಲದೆ ಮನೆಗೊಂದು ಉದ್ಯೋಗ ನೀಡುತ್ತೇವೆ ಎಂದೂ ಹೇಳಿದ್ದೇವೆ. ಈ ಸಂಬಂಧ ರೈತರ ಮನವೊಲಿಸಲಾಗುತ್ತದೆ. ಆದರೆ ಇಲ್ಲೂ ಹುಳಿ ಹಿಂಡಲು ಪ್ರತಿಪಕ್ಷಗಳು ಯತ್ನಿಸುತ್ತಿವೆ. ಇದು ಸರಿಯಲ್ಲ. ಇದೇ ರೀತಿ ತಮ್ಮ ವರ್ತನೆಯನ್ನು ಮುಂದುವರಿಸಿದರೆ ಆ ಪಕ್ಷಗಳಿಗೆ ಜನರೇ ಪಾಠ ಕಲಿಸುತ್ತಾರೆ ಎಂದು ಯಡಿಯೂರಪ್ಪ ಎಚ್ಚರಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ