ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕ ವೈ. ಸಂಪಂಗಿ ಲಂಚ ಪ್ರಕರಣದಲ್ಲಿ ನ್ಯಾಯಾಲಯ ನೀಡುವ ತೀರ್ಮಾನವೇ ಅಂತಿಮ ಎಂದು ಲೋಕಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ತಿಳಿಸಿದ್ದಾರೆ.
ಕಟ್ಟಡ ಕಾಮಗಾರಿಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ ವೇಳೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದ ಸಂಪಂಗಿ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಪಟ್ಟಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ನ್ಯಾಯಾಲಯದ ತೀರ್ಮಾನಕ್ಕೆ ತಾವು ಬದ್ಧರಾಗಿರುವುದಾಗಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ನುಡಿದರು.
ನ್ಯಾಯಾಲಯ ಕೊಡುವ ತೀರ್ಪಿಗೂ ಸದನ ಸಮಿತಿ ನೀಡುವ ತೀರ್ಪಿಗೂ ಯಾವ ಸಂಬಂಧವಿರುವುದಿಲ್ಲ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ವಿರುದ್ದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ನೀಡಲಾಗಿದೆ. ಎಲ್ಲ ಸಾಕ್ಷಿ, ಆಧಾರಗಳನ್ನು ಪರೀಶೀಲನೆ ಮಾಡಿ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.