ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶಾಸಕರ ಮಕ್ಕಳಿಗೆ ಟಿಕೆಟ್ ಕೊಟ್ರೆ ತಪ್ಪೇನಿಲ್ಲ?: ಈಶ್ವರಪ್ಪ (Ishwarappa | BJP | BBMP | Congress | JDS | Election)
Bookmark and Share Feedback Print
 
ಪ್ರತಿಷ್ಠೆಯ ಬಿಬಿಎಂಪಿ ಚುನಾವಣೆಗಾಗಿ ಸಚಿವರು ಮತ್ತು ಶಾಸಕರ ಮಕ್ಕಳಿಗೆ ಟಿಕೆಟ್ ನೀಡಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಸಮರ್ಥಿಸಿಕೊಂಡಿದ್ದು, ಕಾರ್ಯಕರ್ತರ ಇಚ್ಛೆಯಂತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕರ್ತರ ಒತ್ತಾಯದ ಮೇಲೆ ಜನಪ್ರತಿನಿಧಿಗಳ ಮಕ್ಕಳಿಗೆ ಟಿಕೆಟ್ ನೀಡಲಾಗಿದೆ, ಹಾಗಾಗಿ ಇದನ್ನು ಕುಟುಂಬ ರಾಜಕಾರಣ ಎನ್ನಲು ಸಾಧ್ಯವಿಲ್ಲ ಎಂದರು.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆಯಲ್ಲಿ ಆಕಾಂಕ್ಷಿಗಳು ಹೆಚ್ಚಾಗಿರುವುದರಿಂದ ಟಿಕೆಟ್ ದೊರೆಯದೇ ಇದ್ದವರು ಅಸಮಾಧಾನಗೊಳ್ಳುವುದು ಸಹಜ ಎಂದರು. ಆದರೆ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದ ಅವರು, ದೇಶದಲ್ಲಿಯೇ ಬೆಂಗಳೂರು ಮಹಾನಗರ ಪಾಲಿಕೆಯನ್ನು ನಂ.1 ಮಾಡುವ ಗುರಿ ಹೊಂದಲಾಗಿದೆ ಎಂದರು.

ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಮಾಡಿಕೊಂಡಿದ್ದು, ಬಿಬಿಎಂಪಿ ಚುನಾವಣೆಯಲ್ಲಿ ಯಾಕೆ ಮೈತ್ರಿ ಮಾಡಿಕೊಂಡಿಲ್ಲ ಎಂದು ಪ್ರಶ್ನಿಸಿದ ಈಶ್ವರಪ್ಪ, ಮತದಾರರು ಈ ಎರಡು ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಎಚ್ಚರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ