ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮೇ 10ಕ್ಕೆ ಪಿಯುಸಿ; 20ಕ್ಕೆ ಎಸ್ಎಸ್ಎಲ್‌ಸಿ ಫಲಿತಾಂಶ: ಕಾಗೇರಿ (PUC Exam | SSLC | Kageri | Bangalore | Karnataka)
Bookmark and Share Feedback Print
 
ಪಿಯುಸಿ ಫಲಿತಾಂಶವನ್ನು ಮೇ 10ರೊಳಗೆ ಹಾಗೂ ಎಸ್‌ಎಸ್ಎಲ್‌ಸಿ ಫಲಿತಾಂಶವನ್ನು ಮೇ 20ರೊಳಗೆ ಪ್ರಕಟಿಸಲು ಸಿದ್ದತೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಗುರುವಾರ ತಿಳಿಸಿದ್ದಾರೆ.

ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಇಂದು ಮುಕ್ತಾಯವಾಗಿದೆ. ಎಸ್ಎಸ್ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಇನ್ನು ಮೂರ್ನಾಲ್ಕು ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, ಫಲಿತಾಂಶವನ್ನು ಪ್ರಕಟಿಸುವ ನಿರ್ದಿಷ್ಟ ದಿನಾಂಕವನ್ನು ಇನ್ನೊಂದು ವಾರದೊಳಗೆ ಪ್ರಕಟಿಸುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತ ವಿವರಿಸಿದ್ದಾರೆ.

ಎಸ್ಎಸ್ಎಲ್‌ಸಿ ಪರೀಕ್ಷೆಯ ವಿಜ್ಞಾನ ಮತ್ತು ಗಣಿತ ಪ್ರಶ್ನೆ ಪತ್ರಿಕೆಗಳು ಕಠಿಣವಾಗಿದ್ದವು ಎಂಬ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕೊಟ್ಟಿದ್ದರಿಂದ ಅವುಗಳ ಬಗ್ಗೆ ವಿದ್ಯಾರ್ಥಿಗಳು ಹೆಚ್ಚು ಗಮನ ಹರಿಸಿದ್ದರಿಂದ ಪ್ರಶ್ನೆ ಪತ್ರಿಕೆಗಳು ಕಠಿಣತೆಯಿಂದ ಕೂಡಿದ್ದವು ಎಂಬ ಭಾವನೆ ವಿದ್ಯಾರ್ಥಿಗಳಲ್ಲಿ ಬಂದಿದೆ ಎಂದ ಅವರು, ಈ ರೀತಿಯ ಗೊಂದಲ ತಲೆದೋರಬಾರದು ಎಂಬ ನೆಲೆಯಲ್ಲಿ ಮುಂದಿನ ವರ್ಷ ಮಾದರಿ ಪ್ರಶ್ನೆ ಪತ್ರಿಕೆ ನೀಡಬಾರದು ಎಂಬ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ