ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮೇಯರ್ ಚುನಾವಣೆಗೆ ಕಾಂಗ್ರೆಸ್ ಸ್ಪರ್ಧೆಯಿಲ್ಲ: ದೇಶಪಾಂಡೆ (BBMP | Congress | BJP | JDS | Election | Desh pandy)
Bookmark and Share Feedback Print
 
ಶುಕ್ರವಾರ ನಡೆಯಲಿರುವ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆಯ ಮೇಯರ್ ಸ್ಪರ್ಧೆಗೆ ಅಗತ್ಯವಾದ ಬಹುಮತ ಪಕ್ಷದಲ್ಲಿಲ್ಲ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮೇಯರ್ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷ ಬಿಬಿಎಂಪಿಯಲ್ಲಿ ವಿರೋಧ ಪಕ್ಷವಾಗಿ ಕೆಲಸ ಮಾಡಲಿದೆ ಎಂದ ಅವರು, ಈ ಬಗ್ಗೆ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.

ಇದೇ ವೇಳೆ ಅಕ್ರಮ ಗಣಿಗಾರಿಕೆ ವಿರುದ್ಧ ಹರಿಹಾಯ್ದ ಅವರು, ಅಕ್ರಮ ಗಣಿಗಾರಿಕೆ ಗಡಿ ಒತ್ತುವರಿಯಲ್ಲಿ ತನಿಖೆ ಎದುರಿಸುತ್ತಿರುವ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿದರು.
ಸಂಬಂಧಿತ ಮಾಹಿತಿ ಹುಡುಕಿ