ಬೆಂಗಳೂರಿನಲ್ಲಿ ನಡೆದ ಅವಳಿ ಬಾಂಬ್ ಸ್ಫೋಟದ ಬಗ್ಗೆ ತನಿಖೆ ಪ್ರಗತಿಯಲ್ಲಿದ್ದು, ಶೀಘ್ರ ಆರೋಪಿಯನ್ನು ಬಂಧಿಸುವುದಾಗಿ ಗೃಹ ಸಚಿವ ವಿ.ಎಸ್. ಆಚಾರ್ಯ ವಿಶ್ವಾಸವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಬಿ ಪೊಲೀಸರ ಜೊತೆ ಬೇರೆ ಬೇರೆ ಇಲಾಖೆಯ ಪೊಲೀಸರು ಜತೆಗೂಡಿ ತನಿಖೆ ನಡೆಸುತ್ತಿದ್ದಾರೆ. ತನಿಖೆ ಉತ್ತಮ ಹಾದಿಯಲ್ಲಿ ಸಾಗುತ್ತಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ಹಾವೇರಿ ಗೋಲಿಬಾರ್ ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಹಾವೇರಿ ಗೋಲಿಬಾರ್ ಬಗ್ಗೆ ನ್ಯಾಯಮೂರ್ತಿ ಜಗನ್ನಾಥ್ ಶೆಟ್ಟಿ ಆಯೋಗದ ವರದಿಯನ್ನು ಕುಲಂಕಷವಾಗಿ ಪರಿಗಣಿಸಿ ಸಂಪುಟದಲ್ಲಿ ಚರ್ಚೆ ಮಾಡಿ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.
ಪ್ರಕರಣದ ಕುರಿತು ನ್ಯಾಯಾಂಗ ವರದಿಯನ್ನು ಸರ್ಕಾರ ಮೂಲೆಗುಂಪು ಮಾಡುವುದಿಲ್ಲ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.