ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೋ ಮಾಂಸದ ಬದಲು ಬೇರೆ ಮಾಂಸ ಕೊಡಿ: ಮುಮ್ತಾಜ್ ಅಲಿ (Yeddyurappa | Khan | BJP | Karnataka | Bangalore)
Bookmark and Share Feedback Print
 
ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಬಂದಲ್ಲಿ ಬಡವರಿಗೆ ಆಗುವ ತೊಂದರೆ ತಪ್ಪಿಸಲು ಸಬ್ಸಿಡಿ ದರದಲ್ಲಿ ಬೇರೆ ಮಾಂಸ ಸರಬರಾಜು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಒತ್ತಾಯಿಸುವುದಾಗಿ ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಡಾ.ಮುಮ್ತಾಜ್ ಆಲಿಖಾನ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದನದ ಮಾಂಸ ಅತಿ ಕಡಿಮೆ ಬೆಲೆಗೆ ಸಿಗುತ್ತದೆ ಎಂಬ ಕಾರಣಕ್ಕಾಗಿ ಬಡವರು ಖರೀದಿ ಮಾಡುತ್ತಾರೆ. ಈ ನಿಟ್ಟಿನಲ್ಲಿ ಗೋ ಹತ್ಯೆ ನಿಷೇಧಿಸಿದಲ್ಲಿ ಬಡವರ ಮೇಲೆ ಹೆಚ್ಚಿನ ಹೊರೆ ಬಿದ್ದಂತಾಗುತ್ತದೆ. ಆ ಹೊರೆಯನ್ನು ತಪ್ಪಿಸಲು ಬೇರೆ ಮಾಂಸವನ್ನು ಕಡಿಮೆ ದರದಲ್ಲಿ ದೊರಕಿಸುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೆ,ಗೋ ಹತ್ಯೆ ನಿಷೇಧ ಮಾಡುವುದರಿಂದ ಆರ್ಥಿಕವಾಗಿ ಅನೇಕ ಸಮಸ್ಯೆಗಳು ಉದ್ಭವವಾಗುತ್ತದೆ. ಈ ನಿಟ್ಟಿನಲ್ಲಿ ಈ ಉದ್ಯಮ ನಂಬಿರುವವರಿಗೆ ಪುನರ್ವಸತಿ ಕಲ್ಪಿಸುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಹಜ್ ಯಾತ್ರೆ ಕುರಿತು ಕೇಂದ್ರ ಸರ್ಕಾರ ಸಬ್ಸಿಡಿ ಕಡಿತ ಮಾಡಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಆದೇಶ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ