ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪಂಚಾಯತ್ ರಾಜ್ ವ್ಯವಸ್ಥೆ: ರಾಜ್ಯಕ್ಕೆ ಕೇಂದ್ರದ ಪ್ರಶಸ್ತಿ (BJP | Yeddyurappa | Karnataka | UPA | JDS | Bangalore)
Bookmark and Share Feedback Print
 
ರಾಜ್ಯದಲ್ಲಿ ಅತ್ಯುತ್ತಮ ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸಿದ್ದಕ್ಕೆ ಕೇಂದ್ರ ಸರ್ಕಾರ ಕರ್ನಾಟಕ ಮತ್ತು ಕೇರಳ ಸರ್ಕಾರಕ್ಕೆ ಪ್ರಶಸ್ತಿ ಘೋಷಿಸಿದ್ದು, ಶನಿವಾರ ಕೇಂದ್ರ ರಾಜ್ಯಕ್ಕೆ ಪ್ರಶಸ್ತಿ ಪ್ರದಾನ ಮಾಡಿದೆ.

ಅಲ್ಲದೇ, ಪ್ರಶಸ್ತಿ ಜೊತೆಗೆ ಎರಡೂವರೆ ಕೋಟಿ ರೂಪಾಯಿ ನಗದು ಬಂದಿದ್ದು, ಈ ಸಾಧನೆಗೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಪಂಚಾಯತ್ ರಾಜ್ ಉತ್ತಮ ವ್ಯವಸ್ಥೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ ಕೇಂದ್ರಕ್ಕೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಅವರು, ಆ ನಿಟ್ಟಿನಲ್ಲಿ ಸರ್ಕಾರದಿಂದ ಗ್ರಾಮ ಪಂಚಾಯ್ತಿಗಳಿಗೆ ಇನ್ನೂ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಏತನ್ಮಧ್ಯೆ ಹಸಿರು ಬೆಂಗಳೂರು ನಿರ್ಮಾಣಕ್ಕೆ ಪಣ ತೊಟ್ಟಿರುವುದಾಗಿ ಹೇಳಿದ ಮುಖ್ಯಮಂತ್ರಿಗಳು, ಐದು ಸಾವಿರ ಗಿಡಗಳನ್ನು ನೆಡುವ ಯೋಜನೆ ಹೊಂದಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಮತದಾರರಿಗೆ ಹಣ ಹಂಚುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪ ಮಾಡುತ್ತಿವೆ. ಸೋಲಿನ ಭೀತಿಯಿಂದ ವಿರೋಧ ಪಕ್ಷಗಳು ಈ ರೀತಿ ಆರೋಪ ಮಾಡುತ್ತಿವೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ