ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ದಂಡಾವತಿ ಯೋಜನೆ ಕೈಬಿಡುವ ಪ್ರಶ್ನೆಯೇ ಇಲ್ಲ: ಸಿಎಂ (Yeddyurappa | Deve gowda | Bangarappa | BJP)
Bookmark and Share Feedback Print
 
ಯಾರು ಎಷ್ಟೇ ವಿರೋಧಿಸಿದರೂ ದಂಡಾವತಿ ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಮಂಡಳಿ ನ್ಯಾಯಾಧೀಕರಣ ವಿರೋಧ ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ನ್ಯಾಯಾಧಿಕರಣಕ್ಕೆ ಅರಿವು ಮೂಡಿಸಿ ಯೋಜನೆಯನ್ನು ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಯೋಜನೆಯ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರು ಕಲ್ಲು ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಯಾರೇ ವಿರೋಧಿಸಿದರೂ ಈ ಯೋಜನೆಯಂದ ಲಕ್ಷಾಂತರ ಜನರಿಗೆ ಅನುಕೂಲವಾಗುವುದರಿಂದ ಯೋಜನೆ ಅನುಷ್ಠಾನ ಮಾಡಿಯೇ ಸಿದ್ಧ ಎಂದು ಘೋಷಿಸಿದ್ದಾರೆ.

ಇದೇ ವೇಳೆ ಕೃಷಿಗೆ ನೀಡುತ್ತಿರುವ ಸಬ್ಸಿಡಿ ಹಿಂತೆಗೆತದ ಕುರಿತು ಪ್ರತಿಕ್ರಿಯಿಸಿದ ಅವರು, ಕೃಷಿ, ಹನಿ ನೀರಾವರಿ ಮೊದಲಾದವುಗಳಿಗೆ ನೀಡುತ್ತಿರುವ ಸಬ್ಸಿಡಿಯನ್ನು ಹಿಂತೆಗೆಯುವ ಪ್ರಶ್ನೆಯೇ ಇಲ್ಲ. ಆದರೆ ನೂರರಷ್ಟು ಸಬ್ಸಿಡಿ ನೀಡುವುದು ಸಾಧ್ಯವಿಲ್ಲ. ಇದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಶೇ. 75ರಷ್ಟು ಸಬ್ಸಿಡಿಯನ್ನು ಸರ್ಕಾರ ನೀಡಲು ಬದ್ಧವಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ