ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಫೋನ್ ಕದ್ದಾಲಿಸುವವರಿಗೆ ಶಂಕೆ ಇರುತ್ತೆ: ಸಿಎಂ ತಿರುಗೇಟು (Kumaraswamy | Deve gowda | BJP | JDS | UPA)
Bookmark and Share Feedback Print
 
ರಾಷ್ಟ್ರರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ದೂರವಾಣಿ ಕದ್ದಾಲಿಕೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಆಡಳಿತಾರೂಢ ಬಿಜೆಪಿ ಸರ್ಕಾರ ಪಕ್ಷದ ಸಚಿವರು, ಶಾಸಕರ ದೂರವಾಣಿಯನ್ನು ಕದ್ದಾಲಿಸಲಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾರಸಗಟಾಗಿ ತಳ್ಳಿಹಾಕಿದ್ದಾರೆ.

ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರವಾಣಿ ಕದ್ದಾಲಿಸುವವರಿಗೆ ಮಾತ್ರ ಈ ರೀತಿಯ ಅನುಮಾನ ಮೂಡುವುದು ಸಹಜ ಎಂದು ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಒಂದು ವೇಳೆ ರಾಜ್ಯದಲ್ಲಿ ಸಚಿವರ, ಶಾಸಕರ ದೂರವಾಣಿ ಕದ್ದಾಲಿಸಲಾಗುತ್ತಿದೆ ಎಂಬ ಶಂಕೆ ಇದ್ದರೆ ಕುಮಾರಸ್ವಾಮಿಯವರ ನೇತೃತ್ವದಲ್ಲೇ ತನಿಖೆ ನಡೆಸಲು ಸಿದ್ದ ಎಂದು ವ್ಯಂಗ್ಯವಾಗಿ ಹೇಳಿದರು.

ಕೇಂದ್ರದ ಆಡಳಿತಾರೂಢ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಶರದ್ ಪವಾರ್, ಕಾರಟ್ ನಿತೀಶ್ ಕುಮಾರ್ ಸೇರಿದಂತೆ ಪ್ರಮುಖ ನಾಯಕರ ಫೋನ್ ಕದ್ದಾಲಿಸಿದೆ ಎಂಬ ಪತ್ರಿಕೆಯೊಂದರ ವರದಿ ಬಹಿರಂಗಗೊಂಡ ಬೆನ್ನಲ್ಲೇ ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರದ ಸಚಿವರು, ಶಾಸಕರ ಫೋನ್ ಕದ್ದಾಲಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಎಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ