ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದುರಾಡಳಿತವನ್ನು ಕೊನೆಗಾಣಿಸಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಮತ್ತೆ ಪಣ ತೊಟ್ಟಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ಸಂಘಟಿಸಲು ಮೇ 18ರಿಂದ 4ತಿಂಗಳ ಕಾಲ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದರು.
ರಾಜ್ಯದಲ್ಲಿ ಯಾರು ಯಾವುದೇ ಪ್ರಯತ್ನ ಮಾಡಿದರೂ ಜೆಡಿಎಸ್ ಶಕ್ತಿಯನ್ನು ಕುಂದಿಸಲು ಸಾಧ್ಯವಿಲ್ಲ. ಕಾರ್ಯಕರ್ತರ ಶ್ರಮದಿಂದ ಪಕ್ಷವನ್ನು ಸಂಘಟನೆ ಮಾಡುವುದಾಗಿಯೂ ತಿಳಿಸಿದರು. ಅಲ್ಲದೇ ಕೇಂದ್ರ ಸಚಿವ ಶರದ್ ಪವಾರ್ ಸೇರಿದಂತೆ ನಾಲ್ಕು ಪ್ರಮುಖ ರಾಜಕಾರಣಿಗಳ ಟೆಲಿಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಪ್ರಕಟಿತ ವರದಿಯ ಹಿನ್ನೆಲೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಪಟ್ಟಂತೆ ರೆಡ್ಡಿ ಸಹೋದರರನ್ನು ಸಚಿವ ಸಂಪುಟದಿಂದ ಕೈ ಬಿಡದೆ ಇರಲು ಸುಷ್ಮಾ ಸ್ವರಾಜ್ ರೆಡ್ಡಿ ಸಹೋದರರ ಋಣ ಸಂದಾಯ ಮಾಡುತ್ತಿರುವುದೇ ಕಾರಣ ಎಂದರು.