ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಟೆಲಿಫೋನ್ ಕದ್ದಾಲಿಕೆ ಕಾಂಗ್ರೆಸ್ ಸಂಸ್ಕೃತಿ: ಅಶೋಕ್ (BJP | Congress | UPA | Ashok | Telephone)
Bookmark and Share Feedback Print
 
ಟೆಲಿಫೋನ್ ಕದ್ದಾಲಿಕೆ ಬಿಜೆಪಿ ಸಂಸ್ಕೃತಿಯಲ್ಲಿಲ್ಲ. ಅದು ಕಾಂಗ್ರೆಸ್ ಸಂಸ್ಕೃತಿ. ಈ ಬಗ್ಗೆ ಪ್ರತಿಪಕ್ಷಗಳು ಆಡಳಿತಾರೂಢ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಿವೆ ಎಂದು ಸಾರಿಗೆ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಂಚಿನಿಂದ ನಡೆದಿರುವ ಟೆಲಿಫೋನ್ ಕದ್ದಾಲಿಕೆಯನ್ನು ಮರೆಮಾಚುವ ನಿಟ್ಟಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯದಲ್ಲಿಯೂ ಟೆಲಿಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಇದು ಬರೀ ಕುಂಟು ನೆಪವಷ್ಟೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಮಾತನಾಡಿದ ಅವರು, ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಗೆ ಪಕ್ಷದ ಜನಪ್ರತಿನಿಧಿಗಳು ಭೇಟಿ ನೀಡಿ, ಆಯ್ಕೆ ಕುರಿತು ತಂತ್ರಗಾರಿಕೆ ರೂಪಿಸಲಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಚುನಾವಣೆಯು ಮುಂದಿನ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ವೇದಿಕೆಯಾಗಲಿರುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಿ ಚುನಾವಣಾ ತಂತ್ರ ರೂಪಿಸಲಾಗುವುದು ಎಂದು ಅವರು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ