ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಾಳೆಯಿಂದ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಆರಂಭ (CET | Bangalore | Karnataka | CET Exam 2010)
Bookmark and Share Feedback Print
 
ವೃತ್ತಿ ಶಿಕ್ಷಣದ ವಿವಿಧ ಕೋರ್ಸ್‌ಗಳಿಗೆ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬುಧವಾರದಿಂದ ಏಪ್ರಿಲ್ 30ರವರೆಗೆ ರಾಜ್ಯದ 238 ಕೇಂದ್ರಗಳಲ್ಲಿ ನಡೆಯಲಿದೆ.

ಬೆಂಗಳೂರಿನ 58 ಕೇಂದ್ರಗಳಲ್ಲಿ 32,034 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇನ್ನುಳಿದಂತೆ ರಾಜ್ಯದ 180 ಕೇಂದ್ರಗಳಲ್ಲಿ 83,809 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಒಟ್ಟಾರೆ 1,15,734 ಮಂದಿ ಪರೀಕ್ಷೆಗೆ ಹಾಜರಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ನಾಳೆ ಬೆಳಿಗ್ಗೆ 10-30ರಿಂದ 11-50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2-30ರಿಂದ 3-50ರವರೆಗೆ ಗಣಿತ ಪರೀಕ್ಷೆ ನಡೆಯಲಿದೆ. ಏಪ್ರಿಲ್ 29ರಂದು ಬೆಳಿಗ್ಗೆ 10-30ರಿಂದ 11-50ರವರೆಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ 2-30ರಿಂದ 3-50ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ.

ಏಪ್ರಿಲ್ 30ರಂದು ಬೆಳಿಗ್ಗೆ 11ಕ್ಕೆ ಗಡಿನಾಡ ಕನ್ನಡಿಗರಿಗೆ ಹಾಗೂ ಮಧ್ಯಾಹ್ನ 1 ಗಂಟೆಗೆ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಸಿಇಟಿ ಬರೆಯಲಿರುವ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರವೇಶ ಪತ್ರ ಕಳುಹಿಸಿದ್ದು, ಪ್ರವೇಶ ಪತ್ರ ತಲುಪದೇ ಇರುವ ವಿದ್ಯಾರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಖಾಸಗಿ ಕಾಲೇಜುಗಳ ಪ್ರಾತಿನಿಧಿಕ ಸಂಸ್ಥೆ ಕಾಮೆಡ್-ಕೆ ನಡೆಸುವ ಸಿಇಟಿ ಪರೀಕ್ಷೆಗಳು ಮೇ 9ರಿಂದ ಪ್ರಾರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ