ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್-ಎಡಪಕ್ಷ ಪ್ರತಿಭಟನೆ (Deve gowda | CPI(M) | JDS | Kumaraswamy | Palace Ground)
Bookmark and Share Feedback Print
 
ಕೇಂದ್ರ ಸರ್ಕಾರದ ಬೆಲೆ ಏರಿಕೆ ಮತ್ತು ಜನವಿರೋಧಿ ನೀತಿಯನ್ನು ಖಂಡಿಸಿ ಜೆಡಿಎಸ್ ಮತ್ತು ಎಡಪಕ್ಷಗಳು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ವಾಗ್ದಾಳಿ ನಡೆಸಿದವು.

ನಗರದ ಅರಮನೆ ಮೈದಾನದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಎಡಪಕ್ಷಗಳ ಮುಖಂಡರಾದ ವಿ.ಜೆ.ಕೆ. ನಾಯರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ಜನವಿರೋಧಿ ಹಾಗೂ ಬೆಲೆ ಏರಿಕೆ ಕ್ರಮವನ್ನು ತೀಕ್ಷ್ಣವಾಗಿ ಖಂಡಿಸಿದ ನಾಯಕರು, ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದಾಗಿ ಆಹಾರ ಪದಾರ್ಥಗಳು ಗಗನೇಕ್ಕೇರಿದೆ. ಇದರಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಆರೋಪಿಸಿದರು.

ಅಲ್ಲದೆ, ಕೇಂದ್ರ ಸರ್ಕಾರ ರಸಗೊಬ್ಬರದ ಬೆಲೆಯನ್ನು ಹೆಚ್ಚಳ ಮಾಡಿ ರೈತ ಸಮುದಾಯಕ್ಕೆ ದೊಡ್ಡ ಮಟ್ಟದಲ್ಲಿ ಅನ್ಯಾಯ ಮಾಡುತ್ತಿದೆ. ಸಬ್ಸಿಡಿಯಲ್ಲಿ ಕಡಿತ ಮಾಡದೆ ಹಿಂದೆ ಇರುವ ಪ್ರಮಾಣವನ್ನೇ ಮುಂದುವರಿಸಿಕೊಂಡು ಹೋಗುವಂತೆ ಎಡಪಕ್ಷಗಳು ಈ ಸಂದರ್ಭದಲ್ಲಿ ಒತ್ತಾಯ ಮಾಡಿದೆ.
ಸಂಬಂಧಿತ ಮಾಹಿತಿ ಹುಡುಕಿ