ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹೊಗೇನಕಲ್: ತಮಿಳುನಾಡು ವಿರುದ್ಧ ಕರವೇ ಪ್ರತಿಭಟನೆ (Hogenakkal | Tamil nadu | Karnataka | KRV | BJP)
Bookmark and Share Feedback Print
 
ಹೊಗೇನಕಲ್ ಅರಣ್ಯ ಪ್ರದೇಶವನ್ನು ತಮಿಳುನಾಡು ಸರ್ಕಾರ ಒತ್ತುವರಿ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರತಮಿಳುನಾಡಿಗೆ ತೆರಳುತ್ತಿದ್ದ ಲಾಲ್‌ಭಾಗ್ ಎಕ್ಸ್‌ಪ್ರೆಸ್ ರೈಲನ್ನು ತಡೆದು ಮಂಗಳವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ತಮಿಳುನಾಡು ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣ ಗೌಡ, ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪರ ಧ್ವನಿ ಎತ್ತದ ರಾಜ್ಯದ ಎಲ್ಲಾ ಶಾಸಕರ ವಿರುದ್ಧ ಹಾರಿಹಾಯ್ದರು.

ಕೇಂದ್ರ ಸರ್ಕಾರದ ಜಂಟಿ ಸರ್ವೇ ಮುಗಿಯುವವರೆಗೂ ವಿವಾದಿತ ಹೊಗೇನಕಲ್ ಅರಣ್ಯ ಪ್ರದೇಶದಲ್ಲಿ ಎರಡೂ ರಾಜ್ಯದವರೂ ಯಾವುದೇ ಕಾಮಗಾರಿಯನ್ನು ನಡೆಸುವಂತಿಲ್ಲ ಎಂದು ತಿಳಿಸಿದೆ. ಆದರೆ ಇತ್ತೀಚೆಗೆ ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರು ಬಜೆಟ್‌ನಲ್ಲಿಹೊಗೇನಕಲ್ ಯೋಜನೆಗೆ 400 ಕೋಟಿ ರೂ. ಹಣವನ್ನು ನಿಗದಿ ಮಾಡಿದ್ದಾರೆ ಎಂದು ದೂರಿದ್ದಾರೆ.

ಈ ಮೂಲಕ ಮತ್ತೊಮ್ಮೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ತಮಿಳುನಾಡು ಈ ಯೋಜನೆಯನ್ನು ತಕ್ಷಣದಲ್ಲಿ ನಿಲ್ಲಿಸದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ