ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ಮುಖಂಡರ ಕೃಪೆಯಿಂದ ಬಿಜೆಪಿ ಉಳಿದಿದೆ: ಎಚ್‌ಡಿಕೆ (Congress | JDS | Kumaraswamy | Deve gowda | BJP)
Bookmark and Share Feedback Print
 
ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರಿಂದಾಗಿಯೇ ರಾಜ್ಯದಲ್ಲಿ ಇನ್ನೂ ಬಿಜೆಪಿ ಸರ್ಕಾರ ಉಳಿದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ತಿಂಗಳ ಹಿಂದೆ ಜೆಡಿಎಸ್ ಶಾಸಕರಿಗೆ ಸಿಹಿ ಸುದ್ದಿ ನೀಡುವ ಭರವಸೆ ನೀಡಿದ್ದು ನಿಜ. ಈ ಸಿಹಿ ಸುದ್ದಿಯನ್ನೇ ಕಹಿ ಮಾಡಿದ ಕ್ರೆಡಿಟ್ ಕಾಂಗ್ರೆಸ್‌ನ ಕೆಲ ನಾಯಕರಿಗೆ ಸಲ್ಲಬೇಕು ಎಂದು ಚುಚ್ಚಿದರು.

ಕಾಂಗ್ರೆಸ್‌ನ ಕೆಲವು ನಾಯಕರು ರಾತ್ರೋರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತಾರೆ. ಇಂತಹ ನಾಯಕರ ಪರೋಕ್ಷ ಬೆಂಬಲದಿಂದಲೇ ಬಿಜೆಪಿ ಸರ್ಕಾರ ಉಳಿದಿದೆ ಎಂದು ಹರಿಹಾಯ್ದರು.

ಬಿಜೆಪಿ ಸರ್ಕಾರದ ವೈಫಲ್ಯ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಜೆಡಿಎಸ್ ಪ್ರಬಲ ಹೋರಾಟ ನಡೆಸುತ್ತಿದೆ. ಕಾಂಗ್ರೆಸ್ ವಿರೋಧ ಪಕ್ಷ ಸ್ಥಾನವನ್ನು ಎಷ್ಟರ ಮಟ್ಟಿಗೆ ನಿಭಾಯಿಸುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ವ್ಯಂಗ್ಯವಾಡಿದರು.

ಯಡಿಯೂರಪ್ಪನವರು ವಿದ್ಯುತ್‌ನಂತಹ ಗಂಭೀರ ಸಮಸ್ಯೆಗಳನ್ನು ಬಗೆಹರಿಸುವ ಬದಲು ವಿರೋಧ ಪಕ್ಷಗಳನ್ನು ಟೀಕಿಸುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ