ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲೂಟಿ ತಡೆಗಾಗಿ ಪ್ರತಿ ಜಿಲ್ಲೆಗೂ ಓಂಬುಡ್ಸ್‌ಮನ್: ಶೆಟ್ಟರ್ (Jagadish Shettar | BJP | Yeddyurappa | Congress)
Bookmark and Share Feedback Print
 
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಹಣ ದುರುಪಯೋಗವಾಗದಂತೆ ತಡೆಯಲು ಪ್ರತಿಯೊಂದು ಜಿಲ್ಲೆಗೆ ಓಂಬುಡ್ಸ್‌ಮನ್‌ಗಳನ್ನು ಶೀಘ್ರದಲ್ಲೇ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ಗುರುವಾರ ತಿಳಿಸಿದ್ದಾರೆ.

ಓಂಬುಡ್ಸ್‌ಮನ್‌ಗಳ ನೇಮಕ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಗ್ರಾಮ ಪಂಚಾಯ್ತಿ ಚುನಾವಣೆ ನಂತರ ಈ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ವಿವರಿಸಿದರು.

ಜಿಲ್ಲಾ ನಿವೃತ್ತ ನ್ಯಾಯಾಧೀಶರನ್ನು ಓಂಬುಡ್ಸ್‌ಗಳನ್ನಾಗಿ ನೇಮಕ ಮಾಡಲು ಉದ್ದೇಶಿಸಿದ್ದು, ಈಗಾಗಲೇ 15 ಜಿಲ್ಲೆಗಳಲ್ಲಿ ನಿವೃತ್ತ ನ್ಯಾಯಾಧೀಶರ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ ಎಂದರು.

ಕೇಂದ್ರ ಸರ್ಕಾರದಿಂದ ಈ ಯೋಜನೆಯಡಿ ಗ್ರಾಮ ಪಂಚಾಯ್ತಿಗಳಿಗೆ ಕಳೆದ ವರ್ಷ 280ಕೋಟಿ ರೂ.ನೆರವು ಬಂದಿತ್ತು. ಈ ವರ್ಷಕ್ಕೆ 4600ಕೋಟಿ ರೂ. ನಿಗದಿಯಾಗಿದೆ. ಇಷ್ಟೊಂದು ಹಣ ಸದ್ಭಳಕೆಯಾಗಬೇಕೆಂಬುದೇ ನಮ್ಮ ಉದ್ದೇಶ. ಯೋಜನೆಯ ಹಣ ದುರುಪಯೋಗವಾಗುತ್ತಿದೆ ಎಂಬ ದೂರುಗಳ ಆಧಾರದ ಮೇಲೆ ಓಂಬುಡ್ಸ್‌ಮನ್‌ಗಳನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ