ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಬಿಎಂಪಿ ನಾಮನಿರ್ದೇಶನ ಸದಸ್ಯರ ನೇಮಕ: ಬಿಜೆಪಿ ಸಿದ್ಧತೆ (BJP | BBMP | Yeddyurappa | Election | Congress)
Bookmark and Share Feedback Print
 
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ 20 ಮಂದಿ ನಾಮನಿರ್ದೇಶನ ಸದಸ್ಯರನ್ನು ನೇಮಕ ಮಾಡುವ ಬಗ್ಗೆ ಆಡಳಿತಾರೂಢ ಬಿಜೆಪಿ ಸದ್ದಿಲ್ಲದೆ ಸಿದ್ಧತೆ ನಡೆಸಿದೆ.

ಈ ಬಗ್ಗೆ ಈಗಾಗಲೇ ರಾಷ್ಟ್ರ ಮಟ್ಟದ ನಾಯಕರೊಬ್ಬರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿ ನಾಮ ನಿರ್ದೇಶನಕ್ಕೆ ಆಯ್ಕೆ ಮಾಡಬೇಕಾದ ಸದಸ್ಯರ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ನಾಮ ನಿರ್ದೇಶನಕ್ಕೆ ಬಿಬಿಎಂಪಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಅವಕಾಶವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಪಕ್ಷಕ್ಕಾಗಿ ಮೊದಲಿನಿಂದಲೂ ದುಡಿದ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕೆಂಬುದು ಪಕ್ಷದ ಹಿರಿಯ ನಾಯಕರ ಅಂಬೋಣವಾಗಿದೆ. ಅಲ್ಲದೆ, ಚುನಾವಣೆಯ ಗೊಂದಲಗಳ ನಡುವೆ ಟಿಕೆಟ್ ಸಿಗದ ಅಭ್ಯರ್ಥಿಗಳನ್ನು ಗುರುತಿಸಿರುವ ಬಿಜೆಪಿ ಅಂತವರಿಗೆ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸಿದೆ.

ಈ ನಡುವೆ, ಬಿಬಿಎಂಪಿಗೆ ಆಯ್ಕೆಯಾದ ಬಿಜೆಪಿ ಸದಸ್ಯರು, ಬೆಂಗಳೂರ ನಗರಕ್ಕೆ ಸಂಬಂಧಪಟ್ಟ ಸಂಸದರು, ಶಾಸಕರು ಜೊತೆ ಸೇರಿ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಕುರಿತು ಗುರುವಾರ ಮಾತುಕತೆ ನಡೆಸುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ನಾಮ ನಿರ್ದೇಶನದ ಕುರಿತು ಚರ್ಚೆಗೆ ಬರುವ ಸಾಧ್ಯತೆಗಳಿವೆ. ಆದರೆ ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಹಿರಿಯ ನಾಯಕರ ತೀರ್ಮಾನವೇ ಅಂತಿಮ ಎಂಬುದು ಎಲ್ಲರ ಅಭಿಪ್ರಾಯವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ