ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್‌ಗೆ ಸಾಮೂಹಿಕ ನಾಯಕತ್ವ ಅಗತ್ಯ: ದೇಶಪಾಂಡೆ (Congress | Desh pandy | KPCC | BJP | JDS)
Bookmark and Share Feedback Print
 
ಕಾಂಗ್ರೆಸ್‌ನಲ್ಲಿ ಒಬ್ಬರೇ ನಾಯಕರು ಸೂಕ್ತ ಎಂಬ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕಿ ಮೋಟಮ್ಮ ಸೇರಿದಂತೆ ಹಲವರ ಅಭಿಪ್ರಾಯಕ್ಕೆ ಪರೋಕ್ಷವಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಆರ್. ವಿ. ದೇಶಪಾಂಡೆ ಪ್ರತಿಕ್ರಿಯಿಸಿ, ಸಾಮೂಹಿಕ ನಾಯಕತ್ವದ ಅತ್ಯವಶ್ಯ ಕಾಂಗ್ರೆಸ್ ಪಕ್ಷಕ್ಕಿದೆ. ಅದರಲ್ಲಿ ಎಲ್ಲರೂ ವಿಶ್ವಾಸಪಡಬೇಕಾದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಪಕ್ಷದೊಳಗಿನ ಭಿನ್ನಾಭಿಪ್ರಾಯ ಬದಿಗಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸವಿಟ್ಟು ಪಕ್ಷವನ್ನು ಬಲಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಯುವಕರಿಗೆ ಆದ್ಯತೆ ನೀಡಬೇಕು. ಪಕ್ಷದ ಹಿರಿಯ ಮುಖಂಡರು ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಇದೇ ವೇಳೆ ಸರ್ಕಾರ ವಿರುದ್ಧ ಹರಿಹಾಯ್ದ ಅವರು, ಸರ್ಕಾರ ಚುನಾವಣೆ ನಡೆಯುತ್ತಿರುವಾಗ ಪಡಿತರ ಚೀಟಿ ವಿತರಿಸುತ್ತಿದೆ. 40 ತಿಂಗಳ ಆಡಳಿತಾವಧಿಯಲ್ಲಿ ಒಂದೇ ಒಂದು ಮನೆ, ನಿವೇಶನ ನೀಡದವರು ಈಗ ಮನೆಗಳನ್ನು ನೀಡುವುದಾಗಿ ಡಂಗುರ ಸಾರಿ ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ