ಅಕ್ರಮ ಗಣಿಗಾರಿಕೆ ಬಗ್ಗೆ ಸುಪ್ರಿಂ ಕೋರ್ಟ್ ತನಿಖೆಗೆ ಆದೇಶಿಸಿದ್ದು, ತನಿಖಾ ತಂಡಗಳು ತನಿಖೆ ನಡೆಸಿರುವ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖಾ ತಂಡಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಈ ಬಗ್ಗೆ ನ್ಯಾಯಾಲಯ ತನ್ನ ತೀರ್ಪನ್ನು ಪ್ರಕಟಿಸುವವರೆಗೂ ಈ ವಿಷಯಕ್ಕೆ ನಾನು ಉತ್ತರಿಸಲಾರೆ ಎಂದರು.
ವಿರೋಧ ಪಕ್ಷಗಳ ನಾಯಕರು ಟೀಕಿಸುವುದಾಕ್ಕಾಗಿ ಹೇಳಿಕೆ ನೀಡುವುದು ಸಹಜ. ಇದನ್ನು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಈ ಬಗ್ಗೆ ವಿರೋಧ ಪಕ್ಷದವರ ಟೀಕೆಗೆ ಯೋಚಿಸುತ್ತಿಲ್ಲ. ರಾಜ್ಯದ ಅಭಿವೃದ್ದಿಯ ಬಗ್ಗೆಯಷ್ಟೇ ಹೆಚ್ಚು ಚಿಂತಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಅಲ್ಲದೆ, ಗಣಿಗಾರಿಕೆ ಕುರಿತು ನ್ಯಾಯಾಲಯದ ತೀರ್ಪಿನ ಬಗ್ಗೆ ಪೂರ್ಣ ವಿಶ್ವಾಸವಿದೆ. ಆದ್ದರಿಂದ ನ್ಯಾಯಾಲಯದ ತೀರ್ಪು ಬರುವವರೆಗೆ ತಾಳ್ಮೆಯಿಂದ ಕಾಯಿರಿ ಎಂದು ಹೇಳಿದ ಅವರು, ನ್ಯಾಯಾಲಯದ ಮೂಲಕ ಸತ್ಯಗಳು ಹೊರಬರಲಿದೆ ಎಂದು ತಿಳಿಸಿದ್ದಾರೆ.