ರಾಜ್ಯದ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತರು ಮಂಗಳವಾರ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಏಳು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ-ಪಾಸ್ತಿಯನ್ನು ಪತ್ತೆ ಹಚ್ಚಿದ್ದಾರೆ.
ಇಂದು ಬೆಳಿಗ್ಗೆ ರಾಜ್ಯದ ಆರು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತರ ಬಲೆಗೆ ಏಳು ಮಂದಿ ಭ್ರಷ್ಟ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಬೆಂಗಳೂರು, ಅಂಕೋಲಾ, ಬೀದರ್ ಸೇರಿದಂತೆ ಆರು ಕಡೆಗಳಲ್ಲಿ ದಾಳಿ ನಡೆಸಿರುವುದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿವರ ನೀಡಿದರು.