ಹಿಂದುಳಿದ ವರ್ಗಗಳಿಗೆ ಮಾರಕವಾಗಿರುವ ಜಗನ್ನಾಥ್ ಮಿಶ್ರಾ ಅವರ ವರದಿಯನ್ನು ವಾಪಸ್ ಪಡೆಯುವಂತೆ ಬಿಜೆಪಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ರಾಮನಾಥ್ ಕೋವಿಂದ್, ಮಿಶ್ರಾ ವರದಿ ಜಾರಿಯಿಂದ ಹಿಂದುಳಿದ ವರ್ಗದವರಿಗೆ ಮೀಸಲಾತಿಯಲ್ಲಿ ಅನ್ಯಾಯವಾಗುತ್ತಿದೆ. ಹಾಗಾಗಿ, ಈ ವರದಿ ಜಾರಿ ಬೇಡ ಎಂದರು.
ಕೇಂದ್ರ ಸರ್ಕಾರ ಈ ವರದಿಯನ್ನು ಜಾರಿಗೊಳಿಸಿದರೆ ಬಿಜೆಪಿ ರಾಷ್ಟ್ರಾದ್ಯಂತ ಹೋರಾಟ ನಡೆಸುವುದಾಗಿ ಅವರು ಈ ಸಂದರ್ಭದಲ್ಲಿ ಎಚ್ಚರಿಸಿದರು.
ಕ್ರೈಸ್ತ ಹಾಗೂ ಮುಸ್ಲಿಮ್ ಧರ್ಮಗಳಿಗೆ ಮತಾಂತರಗೊಂಡ ದಲಿತರಿಗೆ ಮೀಸಲಾತಿ ಸೌಲಭ್ಯ ನೀಡುವುದರಿಂದ ನಿಜವಾದ ದಲಿತರಿಗೆ ಅನ್ಯಾಯವಾಗುತ್ತದೆ. ಹಾಗಾಗಿ, ಮತಾಂತರಿಗಳಿಗೆ ಮೀಸಲಾತಿ ಬೇಡ ಎಂದರು.