ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮುಸ್ಲಿಮ್, ಕ್ರೈಸ್ತರಿಗೆ ಮೀಸಲಾತಿ ಯಾಕೆ?: ತೊಗಾಡಿಯಾ (Muslim | Christian | Thogadiya | Kasab | Court | CID)
Bookmark and Share Feedback Print
 
ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಮುಸ್ಲಿಮರಿಗೆ ಶೇ.10 ಹಾಗೂ ಕ್ರೈಸ್ತರಿಗೆ ಶೇ. 5ರಷ್ಟು ವಿಶೇಷ ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಖಂಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರೆಂದು ಬಿಂಬಿಸಿ ಅವರಿಗೆ ಮೀಸಲಾತಿ ಕೊಡುತ್ತಿರುವುದನ್ನು ಖಂಡಿಸಿ, ವಿದ್ಯಾರ್ಥಿ ಸಮೂಹ ಹಾಗೂ ಯುವ ನಿರುದ್ಯೋಗಿಗಳನ್ನು ಒಗ್ಗೂಡಿಸಿ ದೇಶಾದ್ಯಂತ ಜಾಗೃತಿ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದು ಸಂವಿಧಾನ ಬಾಹಿರವಾಗಿದೆ. ಹೀಗಿದ್ದರೂ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ದಾರಿ ತಪ್ಪಿರುವುದು ಅಚ್ಚರಿ ಮೂಡಿಸಿದೆ ಎಂದ ಅವರು, ಹಾಗಾಗಿ ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದ್ದಾರೆ.

ಪ್ರಸ್ತುತ ಈ ಸಮುದಾಯಗಳು ಶೇ.50ರಷ್ಟು ಮೀಸಲಾತಿ ಸೌಲಭ್ಯ ಪಡೆಯುತ್ತಿದೆ. ಆದರೂ ಇವರನ್ನು ಪ್ರತ್ಯೇಕಿಸಿ ವಿಶೇಷ ಮೀಸಲಾತಿ ನೀಡುವ ಅಗತ್ಯವಾದರೂ ಏನು ಎಂದು ಅವರು ಪ್ರಶ್ನಿಸಿದ್ದಾರೆ.

ಇದೇ ವೇಳೆ ಭಯೋತ್ಪಾದಕ ಕಸಬ್‌ಗೆ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಸಬ್‌ನನ್ನು ನೇಣಿಗೇರಿಸಬೇಕು. ಅಲ್ಲದೇ ಇಲ್ಲಿಯವರೆಗೂ ಕಸಬ್‌ನ ಪೋಷಿಸುತ್ತಾ ಬಂದಿರುವ ಕೇಂದ್ರ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ. ಜಿಹಾದಿಗಳ ರಕ್ಷಣೆ ನೀಡುವ ಮೂಲಕ ಅವರನ್ನು ಸಮರ್ಥಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ